ಸಾಲು ಮರದ ತಿಮ್ಮಕ್ಕ ಅವರಿಗೆ ಐದು ಎಕರೆ ಜಮೀನು ಮಂಜೂರು

16 Dec 2017 5:38 PM | General
481 Report

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಸಾಲುಮರದ ತಿಮ್ಕಕ್ಕ ಇಂಟರ್‍ನ್ಯಾಷನಲ್ ಫೌಂಡೇಷನ್ ಸಹಯೋಗದಲ್ಲಿ ವೃಕ್ಷ ಮಾತೆ ಡಾ. ಸಾಲುಮರದ ತಿಮ್ಮಕ್ಕ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ನ್ಯಾಷನಲ್ ಗ್ರೀನರಿ ಅವಾರ್ಡ್-2017 ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಸಾಲುಮರದ ತಿಮ್ಮಕ್ಕ ಅವರಿಗೆ ಐದು ಎಕರೆ ಜಮೀನು ಮಂಜೂರು ಮಾಡಿ ಅಲ್ಲೆ ಸರ್ಕಾರಿ ನರ್ಸರಿ ಹಾಗೂ ಮನೆ ನಿರ್ಮಿಸಿಕೊಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.  ಬೆಂಗಳೂರು ಸುತ್ತಮುತ್ತ ಭೂಮಿ ಮಂಜೂರಿಗೆ ಕಾಲಾವಕಾಶ ಹಿಡಿಯುತ್ತದೆ. ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಭೂಮಿ ಬೆಲೆ ದುಬಾರಿಯಾಗಿದೆ ಎಂದ ಅವರು, ಒಂದು ವೇಳೆ ಸಾಲುಮರದ ತಿಮ್ಮಕ್ಕ ಅವರು ಚಿತ್ರದುರ್ಗ ಅಥವಾ ಇನ್ಯಾವುದೇ ಭಾಗದಲ್ಲಿ ಭೂಮಿ ಬಯಸಿದರೆ ಐದು ಎಕರೆ ಅಲ್ಲ 10 ಎಕರೆಯನ್ನು ನೀಡಲು ಸಿದ್ದವಿದ್ದೇವೆ. ಇದರ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ. ಆದರೆ ಬೆಂಗಳೂರಿನ ಸುತ್ತಮುತ್ತ ಭೂಮಿ ನೀಡಲು ಕಾಲಾವಕಾಶ ಹಿಡಿಯಲಿದೆ ಎಂದರು.

ಪರಿಸರಕ್ಕಾಗಿ ಸಾಲು ಮರದ ತಿಮ್ಮಕ್ಕ ಅಪಾರ ಕೊಡುಗೆ ನೀಡಿದ್ದಾರೆ. ಇಂದಿನ ಯುವ ಪೀಳಿಗೆಗೆ ಇಂತಹ ಯಾವುದೆ ಕಾಳಜಿ ಇಲ್ಲ. ತಿಮ್ಮಕ್ಕ ಅವರು ತಮ್ಮ ಜೀವನವನ್ನೇ ಇದಕ್ಕಾಗಿ ಮುಡುಪಾಗಿಟ್ಟಿದ್ದಾರೆ. ಇದನ್ನು ಸ್ಮರಿಸಬೇಕು. ಈಗಾಗಲೇ ತಿಮ್ಮಕ ಅವರ ಸಮಸ್ಯೆಗಳಿಗೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇವೆ. ಇನ್ನಷ್ಟು ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹಾಗಾಗಿ ನಾವು ಅಗತ್ಯವಾದ ಎಲ್ಲ ಕ್ರಮಗಳನ್ನು ವಹಿಸಲಿದ್ದೇವೆ ಎಂದರು. 

Edited By

Shruthi G

Reported By

Madhu shree

Comments