ಆರ್ಯವೈಶ್ಯ ಸಮುದಾಯದ ಮೀಸಲಾತಿಗಾಗಿ ಶರವಣರಿಂದ ಜಾಗೃತಿ ಸಮಾವೇಶ

28 Dec 2017 3:15 PM | General
628 Report

ವ್ಯಾಪಾರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಆರ್ಯವೈಶ್ಯ ಸಮುದಾಯ ಇಂದು ಜಾಗತೀಕರಣ, ಉದಾರೀಕರಣದ ಪ್ರಭಾವದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜೀವನ ಉತ್ತಮವಾಗಲು ಮೀಸಲಾತಿ ಅಗತ್ಯವಿದೆ ಎಂದು ವಿಧಾನ ಪರಿಷತ್ತು ಸದಸ್ಯ ಹಾಗೂ ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ರಾಜ್ಯಾಧ್ಯಕ್ಷ ಟಿ.ಎ.ಶರವಣ ಅಭಿಪ್ರಾಯಪಟ್ಟರು.

ಆರ್ಯವೈಶ್ಯ ಮಂಡಳಿಯಿಂದ ಗಂಗೊಂಡನಹಳ್ಳಿಯ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತ ನಾಡಿದರು.ಆರ್ಯವೈಶ್ಯ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಫೆ.18 ರಂದು ಅರಮನೆ ಮೈದಾನದಲ್ಲಿ ಆರ್ಯವೈಶ್ಯ ಸಮುದಾಯದ ಹಕ್ಕುಗಳಿಗಾಗಿ ಒತ್ತಾಯಿಸಿ ಬೃಹತ್‌ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದ ಮೂಲಕ ಸರ್ಕಾರಕ್ಕೆ ವಸ್ತುಸ್ಥಿತಿ ಹಾಗೂ ವಾಸ್ತವದ ಅರಿವು ಮೂಡಿಸಲಾಗುತ್ತದೆ ಎಂದು ಟಿ.ಎ.ಶರವಣ ತಿಳಿಸಿದರು. 

Edited By

Shruthi G

Reported By

Shruthi G

Comments