ನಾಲ್ಕು ವಾರಗಳಲ್ಲಿ ಕಾವೇರಿ ತೀರ್ಪು, ಗೊಂದಲಕ್ಕೆ ತೆರೆ ಎಳೆಯಲಿರುವ ಸುಪ್ರೀಂ

10 Jan 2018 10:14 AM | General
296 Report

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಶಕಗಳಲ್ಲಿ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸಲಾಗಿದೆ. ಈ ಕುರಿತು ಅಂತಿಮ ತೀರ್ಪು ನೀಡಿದ ನಂತರ ಯಾವುದೇ ವೇದಿಕೆ ವಿಷಯವನ್ನು ಪ್ರಸ್ತಾಪಿಸಬಹುದು ತ್ರಿಸದಸ್ಯ ಪೀಠ ಹೇಳಿದೆ.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಒಂದು ತಿಂಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುವ ಸೂಚನೆ ನೀಡಿದ್ದು, ಎರಡು ದಶಕಗಳಿಂದ ಸಾಕಷ್ಟು ಗೊಂದಲ ಸೃಷ್ಟಿಸಲಾಗಿದೆ ಎಂದು ಹೇಳಿದೆ. ನಾಲ್ಕು ವಾರಗಳಲ್ಲಿ ಅಂತಿಮ ತೀರ್ಪು ಪ್ರಕಟಿಸಿದ ನಂತರ ಯಾವುದೇ ವೇದಿಕೆ ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2007ರಲ್ಲಿ ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಕಿರಣ್ ಮೊಜುಂದಾರ್ ನೇತೃತ್ವದ ನಾಗರಿಕರ ವೇದಿಕೆ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ತಿಂಗಳಲ್ಲಿ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

Edited By

Shruthi G

Reported By

Madhu shree

Comments