ಇಂದಿನಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆ ಆರಂಭ

01 Mar 2018 10:20 AM | General
429 Report

ಇಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಸಾಕಷ್ಟು ಭಧ್ರತೆಯಿಂದ ಪರೀಕ್ಷೆಯನ್ನು ಆಯೋಜಿಸಲಾಗಿದೆ.   ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 17 ರವರೆಗೆ ನಡೆಯಲಿದೆ. ಒಟ್ಟು1004 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಈ ಪೈಕಿ 3.52 ಲಕ್ಷ ವಿದ್ಯಾರ್ಥಿಗಳು ಹಾಗೂ 3.37 ವಿದ್ಯಾಥಿನಿಯರಿದ್ದಾರೆ. ಪರೀಕ್ಷಾ ಭದ್ರತೆಗಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 32 ಜಂಟಿ ನಿರೀಕ್ಷಕ ಮೇಲ್ವಿಚಾರಕರನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುವುದರಿಂದ ಈ ಬಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರವೆಂದು ಗುರುತಿಸುವುದನ್ನು ಕೈಬಿಡಲಾಗಿದೆ. ಗುರುವಾರ ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆಗಳು ಜಿಲ್ಲಾ ಕೇಂದ್ರದಿಂದ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 6.30 ರಿಂದ 8 ರವರೆಗೆ ಅವಧಿಯಲ್ಲಿ ಸರಬರಾಜು ಆಗಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದು ಸೋರಿಕೆಗೆ ಅವಕಾಶವಿಲ್ಲ. ವದಂತಿಗಳಿಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಕಿವಿಗೊಡಬಾರದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಪರೀಕ್ಷಾ ಕೇಂದ್ರವಿರುವ ನೂರು ಮೀಟರ್ ಅಂತರದಲ್ಲಿರುವ ಎಲ್ಲಾ ಜೆರಾಕ್ಸ್ ಶಾಪ್ ಗಳನ್ನು ಮುಚ್ಚಿಸಲಾಗಿದೆ.

 

Edited By

Shruthi G

Reported By

Madhu shree

Comments