ಪಬ್ಲಿಕ್ ಟಿವಿ ರಂಗಣ್ಣ ವಿರುದ್ಧ ತಿರುಗಿ ಬಿದ್ದ ಬೆಳೆಗೆರೆ

12 Mar 2018 5:11 PM | General
963 Report

ಟಿಆರ್ ಪಿ ದೋಚುವ ಹಂಬಲದಲ್ಲಿ ನನ್ನ ಪತ್ನಿ, ಮನೆ ಎಲ್ಲ ತೋರಿಸಿದರು. ಸರಿ, ಆದರೆ ನನ್ನ ಹತ್ತು ವರ್ಷದ ಮಗ ಏನು ಮಾಡಿದ್ದ? ಅಪ್ರಾಪ್ತ ವಯಸ್ಸಿನ ಮಗುವಿನ ಚಿತ್ರ ತೋರಿಸೋದು ಅಪರಾಧ. ಈಗ ನಾನು ರಂಗನ ಮೇಲೆ ತುಂಬಾ ದೊಡ್ಡ ಮೊತ್ತಕ್ಕೆ ಕೇಸ್ ಹಾಕುತ್ತಿದ್ದೇನೆ. ಯಾಕೆ ಬಿಡಲಿ, ಹೇಳಿ. ಈ ವಿಷಯದಲ್ಲಿ ಕೋರ್ಟ್ ತುಂಬಾ ಕಠಿಣವಾಗಿ ನಡೆದುಕೊಳ್ಳುತ್ತದೆ. ರಂಗನಿಗೊಂದು ಗತಿ ಕಾಣಿಸುತ್ತೇನೆ.

ಹೀಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ ಪತ್ರಕರ್ತ ಹಾಗೂ ಹಾಯ್ ಬೆಂಗಳೂರ್ ವಾರಪತ್ರಿಕೆ- ಓ ಮನಸೇ ಪಾಕ್ಷಿಕದ ಸಂಪಾದಕರಾದ ರವಿ ಬೆಳಗೆರೆ. ಪಬ್ಲಿಕ್ ಟಿವಿಯ ಎಚ್.ಆರ್.ರಂಗನಾಥ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ, ಈಗಾಗಲೇ ವಕೀಲರನ್ನು ಸಂಪರ್ಕಿಸಿರುವುದಾಗಿ ಬರೆದಿದ್ದಾರೆ. ರಂಗ ನನ್ನ ಮೂವತ್ತು ವರ್ಷಗಳ ಗೆಳೆಯ. ನಾನು ಗೆಳೆತನಕ್ಕೆ ತುಂಬಾ ಬೆಲೆ ಕೊಡುತ್ತೇನೆ. ಸುಪಾರಿ ಎಂಬ ಬೃಹತ್ ನಾಟಕ ನಡೆದಾಗ ಎಲ್ಲ ಚಾನಲ್ ಗಳೂ ಸುದ್ದಿ ಮಾಡಿದವು. ಸುಮ್ಮನೆ ಅಲ್ಲ, ಮುಗಿಬಿದ್ದು ಮಾಡಿದವು. ಹಾಗಿರುವಾಗ ಪಬ್ಲಿಕ್ ಟಿವಿ ಸುದ್ದಿ ಮಾಡಬಾರದು ಅಂತ ನಿರೀಕ್ಷಿಸಲಿಲ್ಲ ನಾನು. ಅಪ್ರಾಪ್ತ ವಯಸ್ಸಿನ ಮಗುವಿನ ಚಿತ್ರ ತೋರಿಸೋದು ಅಪರಾಧ ಎಂದಿದ್ದಾರೆ.


Edited By

Shruthi G

Reported By

Shruthi G

Comments