ಈ ಭಾರಿ ಯುಗಾದಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿ

17 Mar 2018 11:42 AM | General
432 Report

ಹೌದು ಯುಗಾದಿ ಹಬ್ಬವೆಂದರೆ ಹಿಂದುಗಳಿಗೆ ಹೊಸ ವರ್ಷದ ಸಡಗರ ಇನ್ನೊಂದು ಕಡೆ ಎಲ್ಲ ವಸ್ತುಗಳ ಬೆಲೆ ಗಗನಕೇರಿರುತ್ತದೆ. ಆದರೆ ಈ ಭಾರಿ ಆರೀತಿ ಆಗುವುದಿಲ್ಲ. ಈ ಬಾರಿಯ ಯುಗಾದಿ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಕಡಿಮೆಯಾಗಿದ್ದು ಖರೀದಿಯ ಭರಾಟೆ ಜೋರಾಗಿದೆ.

ಹಬ್ಬಕ್ಕೆ ಅಗತ್ಯವಾದ ಹೂವು, ಹಣ್ಣು, ದಿನಸಿ ಮತ್ತಿತರ ವಸ್ತುಗಳ ಬೆಲೆಯನ್ನು ಈ ಹಿಂದಿನ ಹಬ್ಬಗಳಿಗೆ ಹೋಲಿಸಿದರೆ ಯುಗಾದಿ ಹಬ್ಬಕ್ಕೆ ಬೆಲೆಗಳು ಸಾಕಷ್ಟು ಕಡಿಯಾಗಿರುವುದರಿಂದ ಜನರಲ್ಲಿ ಹಬ್ಬದ ಸಡಗರ ಇನ್ನಷ್ಟು ಜಾಸ್ತಿ ಮಾಡಿದೆ. ದ್ರಾಕ್ಷಿ, ಕಿತ್ತಳೆ, ಕಲ್ಲಂಗಡಿ ಸೀಸನ್ ಇರುವುದರಿಂದ ಅವುಗಳ ಬಲೆ ಕಡಿಮೆಯಾಗಿದ್ದರೆ, ಸೇಬು, ದಾಳಿಂಬೆ ಬೆಲೆ ಹೆಚ್ಚಾಗಿದೆ. ಇನ್ನು ಮಾರುಕಟ್ಟೆಗೆ ಬೆಂಗಳೂರು ಗ್ರಾಮಾಂತರ, ಆನೇಕಲ್, ತುಮಕೂರು, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಸಾಕಷ್ಟು ಪ್ರಮಾಣದಲ್ಲಿ ಹೂವು ಆಗಮಿಸುತ್ತಿದೆ. ಜೊತೆಗೆ ತಮಿಳುನಾಡಿನಿಂದಲೂ ಬರುತ್ತಿದ್ದು, ಹೂವಿನ ಬೆಲೆಯಲ್ಲೂ ಹೆಚ್ಚಿನ ವ್ಯತ್ಯಾಸವಿಲ್ಲ. ಕಳೆದ ಗೌರಿ-ಗಣೇಶ, ವರಮಹಾಲಕ್ಷ್ಮಿ ಹಬ್ಬಗಳಲ್ಲಿ ಗಗನಕ್ಕೇರಿದ್ದ ಪದಾರ್ಥಗಳ ಈ ವರ್ಷದ ಯುಗಾದಿಗೆ ಕೊಂಚ ಇಳಿಕೆಯಾಗಿದೆ. ಅದರಲ್ಲೂ ತರಕಾರಿಗಳ ಬೆಲೆ ತೀವ್ರ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೂ ಖುಷಿ ನೀಡಿದೆ.

Edited By

Shruthi G

Reported By

Madhu shree

Comments