Report Abuse
Are you sure you want to report this news ? Please tell us why ?
ಮುಂದಿನ ಎರಡು ದಿನಗಳ ಕಾಲ ಮುಂದುವರೆಯಲಿದೆ ವರುಣನ ಆರ್ಭಟ

31 Mar 2018 11:08 AM | General
512
Report
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ.ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ.
ಕರಾವಳಿ ಭಾಗ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಮಧ್ಯಾಹ್ನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಮೆಜೆಸ್ಟಿಕ್, ಮಾಗಡಿ ರೋಡ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ಲಗ್ಗೆರೆ, ಯಶವಂತಪುರ ಸೇರಿದಂತೆ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಜನರು ಪರದಾಡುವಂತಾಯಿತು.

Edited By
Shruthi G

Comments