ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ

03 Apr 2018 6:02 PM | General
659 Report

ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವರಿ ಕೇಂದ್ರ ತಿಳಿಸಿದೆ.

ಛತ್ತೀಸ್ ಗಡ ದಿಂದ ತಮಿಳುನಾಡಿನವರೆಗೆ ಟ್ರಫ್ ಇರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಅವರು ನೀಡಿದರು.

 

Edited By

Shruthi G

Reported By

Madhu shree

Comments