ಅಂಚೆ ಕಚೇರಿ ಗ್ರಾಹಕರಿಗೆ ಇಲ್ಲಿದೆ ಸಿಹಿ ಸುದ್ದಿ...!!

09 Apr 2018 11:33 AM | General
450 Report

ಪೋಸ್ಟ್ ಆಫೀಸ್ ನಲ್ಲಿ ನೀವು ಖಾತೆ ಹೊಂದಿದ್ದಲ್ಲಿ ನಿಮ್ಮ ಖಾತೆಯಿಂದ ಯಾವುದೇ ಬ್ಯಾಂಕ್ ಗಳಿಗೆ ಹಣ ವರ್ಗಾಯಿಸುವ ಅಥವಾ ಬೇರೆ ಬ್ಯಾಂಕ್ ಖಾತೆಯಿಂದ ಅಂಚೆ ಕಚೇರಿ ಖಾತೆಗೆ ಹಣ ಸಂದಾಯ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗ್ತಿದೆ. ಮೇ ತಿಂಗಳ ನಂತರ ನಿಮ್ಮ ಪೋಸ್ಟ್ ಆಫೀಸ್ ಉಳಿತಾಯ ಖಾತೆಯಿಂದ ಹಣ ವರ್ಗಾಯಿಸಬಹುದಾಗಿದೆ.

ದೇಶದ 34 ಕೋಟಿ ಅಂಚೆ ಖಾತೆದಾರರಿಗೆ ಡಿಜಿಟಲ್ ವ್ಯವಹಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇಶದ 1.55 ಲಕ್ಷ ಅಂಚೆ ಕಚೇರಿಗಳಿಗೆ ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಲಿಂಕ್ ಮಾಡಲು ಕೇಂದ್ರ ಹಣಕಾಸು ಸಚಿವಾಲಯ ಸಮ್ಮತಿಸಿದೆ. ಬ್ಯಾಂಕ್ ಗಳಲ್ಲಿರುವ ಆರ್.ಟಿ.ಜಿ.ಎಸ್., ನೆಫ್ಟ್, ಇತರೆ ಸೇವೆಗಳನ್ನು ಅಂಚೆ ಕಚೇರಿಯಲ್ಲಿಯೂ ಪಡೆಯಬಹುದಾಗಿದೆ. ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ವ್ಯವಸ್ಥೆ ಜಾರಿಗೆ ಬಂದಲ್ಲಿ ದೇಶದ ಅತಿದೊಡ್ಡ ಬ್ಯಾಂಕಿಂಗ್ ನೆಟ್ ವರ್ಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಪ್ರಸ್ತುತ ಅಂಚೆ ಕಚೇರಿಗಳಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ಪೇಮೆಂಟ್ ಬ್ಯಾಂಕ್ ವ್ಯವಸ್ಥೆ ಜಾರಿಯಾದಲ್ಲಿ ಬ್ಯಾಂಕ್ ನಂತೆಯೇ ಎಲ್ಲಾ ಸೇವೆಗಳನ್ನು ಪಡೆಯಬಹುದಾಗಿದೆ.

Edited By

Shruthi G

Reported By

Madhu shree

Comments