ಹೆಡ್ಕಾನ್ಸ್ಟೇಬಲ್ ಕಾರಿನಲ್ಲೇ ಹೆರಿಗೆ, ಮಾನವೀಯತೆ ಮೆರೆದ ಪೊಲೀಸ್ ಹೆಡ್ಕಾನ್ಸ್ಟೇಬಲ್

13 Apr 2018 2:50 PM | General
391 Report

ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರು ಪೊಲೀಸ್ ಹೆಡ್ಕಾನ್ಸ್ಟೇಬಲ್ ಒಬ್ಬರ ಕಾರಿನಲ್ಲೇ ಮಗುವಿಗೆ ಜನ್ಮನೀಡಿದ ಪ್ರಸಂಗ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಮಂಗಳೂರು ಹೊರವಲಯದ ಕೋಟೆಕಾರು ಬೀರಿ ನಿವಾಸಿಯಾದ  ರವಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತಿದ್ದಾರೆ. ಅವರು ಗುರುವಾರ ಮುಂಜಾನೆ ತಮ್ಮ ಕಾರಿನಲ್ಲಿ ತನ್ನ ಮಕ್ಕಳನ್ನು ಎಕ್ಕೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಕರೆದುಕೊಂಡು ಬರುತ್ತಿದ್ದರು 'ರಿಕ್ಷಾದಲ್ಲಿ ಗರ್ಭೀಣಿಯೊಬ್ಬರು ನೋವಿನಿಂದ ಒದ್ದಾಡುತ್ತಿದ್ದಾರೆ. ದಯವಿಟ್ಟು ಸಹಾಯಮಾಡಿ ಎಂದು ಕೇಳಿದ್ದಾರೆ. ಗರ್ಭೀಣಿ ಮಹಿಳೆಯನ್ನು ಆ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ' ಎಂದು ನೌಷಾದ್ ವಿನಂತಿಸಿದರು. ಸೂಕ್ಷ್ಮ ಪರಿಸ್ಥಿತಿಯನ್ನು  ಅರಿತ ರವಿಯವರು ತಕ್ಷಣ ಸ್ಪಂದಿಸಿ ಮಹಿಳೆಯನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪಂಪುವೆಲ್ ಜಂಕ್ಷನ್ ತಲುಪುತ್ತಿದ್ದಂತೆ ಗರ್ಭಿಣಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ರವಿಯವರು ತಾಯಿ ಮತ್ತು ಮಗುವನ್ನು ನೇರ ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು  ಹೆಡ್‌ಕಾನ್ಸ್ಟೇಬಲ್‌ ಮಾನವೀಯತೆ ಮೆರೆದಿದ್ದಾರೆ

Edited By

Manjula M

Reported By

Manjula M

Comments