ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿ

14 Apr 2018 1:19 PM | General
391 Report

ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಕ್ರಮವಾಗಿ ಸುಮಾರು 75 ಮೂಟೆ ಪಡಿತರ ಅಕ್ಕಿಯನ್ನು ಚುನಾವಣಾ ಅಧಿಕಾರಿಗಳ ಕಣ್ತಪ್ಪಿಸಿ ಸಾಗಾಣೆ ಮಾಡುತ್ತಿದ್ದ ವೇಳೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ತಿಳಿದು ಟೆಂಪೋವನ್ನು ಚೇಸಿಂಗ್ ಮಾಡುತ್ತಿದ್ದ ವೇಳೆಯಲ್ಲಿ  ಬಂಗಾರ ಪೇಟೆ ಪಟ್ಟಣದ ಹೊರವಲಯದಲ್ಲಿ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣವನ್ನು ತಪ್ಪಿ ಅಕ್ಕಿ ತುಂಬಿದ ಟೆಂಪೋ ಪಲ್ಟಿಯಾಗಿದೆ. ಈ ಘಟನೆ ಸಂಬಂಧ ಬಂಗಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಈಗಾಗಲೆ  ದಾಖಲಾಗಿದೆ.

Edited By

Manjula M

Reported By

Manjula M

Comments