ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

18 Apr 2018 9:56 AM | General
440 Report

ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳು ಏಪ್ರಿಲ್ 18 ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ.ಎಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾಗಿದೆ.

ಈ ಬಾರಿ 1,00,077 ವಿದ್ಯಾರ್ಥಿಗಳು ಮತ್ತು 98,568 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,98,639 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿಯನ್ನು  ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 86 ಪರೀಕ್ಷಾ ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವಿಷಯದ ಕಾರ್ಯಕ್ಕಾಗಿ 430 ವೀಕ್ಷಕರು, 860 ಮಂದಿ ವಿಶೇಷ ಜಾಗೃತ ದಳದ ಸದಸ್ಯರು, 430 ಪ್ರಶ್ನೆ ಪತ್ರಿಕೆ ಪಾಲಕರು, 12,440 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟು 31,360 ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ರೀತಿಯ ಕೈಗಡಿಯಾರ ಕಟ್ಟಿಕೊಂಡು, ತೆಗೆದುಕೊಂಡು ಬರುವಂತಿಲ್ಲ. ಜತೆಗೆ ಟ್ಯಾಬ್ಲೆಟ್‌, ಮೊಬೈಲ್‌ ಹಾಗೂ ಕ್ಯಾಲ್ಕುಲೇಟರ್‌ಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತರಲು ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

Edited By

Manjula M

Reported By

Manjula M

Comments