ಮೇ 11, 12 ಪದವಿ ಪೂರ್ವ ಕಾಲೇಜುಗಳಿಗೆ ರಜೆ

26 Apr 2018 1:58 PM | General
419 Report

ರಾಜ್ಯ ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮೇ 11 ಮತ್ತು 12ರಂದು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚುನಾವಣೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪನ್ಯಾಸಕರು ಪಾಲ್ಗೊಳ್ಳುವುದರಿಂದ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಮತಗಟ್ಟೆಗಳಾಗಿ ಬಳಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೇ 11 ಮತ್ತು 12ರಂದು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶವನ್ನು ತಿಳಿಸಿದ್ದಾರೆ.

 

Edited By

Manjula M

Reported By

Manjula M

Comments