ಪಿ.ಯು.ಸಿ ಪ್ರಾರಂಭವಾದ್ರೂ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಬಸ್ ಪಾಸ್

03 May 2018 11:13 AM | General
483 Report

ಉಪನ್ಯಾಸಕರ ವಿರೋಧದ ನಡುವೆಯೂ ಕೂಡ  ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 2 ರಿಂದ ತರಗತಿಗಳನ್ನು ಪ್ರಾರಂಭಿಸಿದ್ದು, ಎಂದಿನಂತೆ ಉಪನ್ಯಾಸಕರು ತರಗತಿಗಳಿಗೆ ಹಾಜರಾಗಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ತರಗತಿ ಆರಂಭಿಸುವಂತೆ ಉಪನ್ಯಾಸಕರು ಬೇಡಿಕೆಯನ್ನು ಇಟ್ಟಿದ್ದರು,  ಆದರೆ, ಒತ್ತಡಕ್ಕೆ ಒಪ್ಪದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ತರಗತಿ ಆರಂಭಿಸಲು ಆದೇಶವನ್ನು ಹೊರಡಿಸಿದ್ದಾರೆ. ಇಂದು ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ಸದಸ್ಯರು ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ನಡುವೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸಿಗದಂತಾಗಿದೆ. ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅನ್ನು ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಿದೆ. ಆದರೆ, ಆದೇಶ ಹೊರಡಿಸಿಲ್ಲ. ಶೈಕ್ಷಣಿಕ ವರ್ಷ ಆರಂಭವಾಗಲಿರುವ ಜೂನ್ ನಿಂದ ಪಾಸ್ ವಿತರಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮುಂದಾಗಿದೆ. ಇದರಿಂದಾಗಿ ತರಗತಿ ಆರಂಭವಾಗಿದ್ದರೂ, ವಿದ್ಯಾರ್ಥಿಗಳು ಬಸ್ ಪಾಸ್ ಇಲ್ಲದಂತೆ ಪರದಾಡುವಂತಾಗಿದೆ.

 

Edited By

Manjula M

Reported By

Manjula M

Comments