ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಉಡುಪಿ ಗೆ ಮೊದಲ ಸ್ಥಾನ..!

07 May 2018 12:14 PM | General
464 Report

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇಂದು ಮಹತ್ತರವಾದ ದಿನವಾಗಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಹೊರ ಬಿದ್ದಿದ್ದೆ.

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಈ ಬಾರಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡರೆ  ಉತ್ತರ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಸರಿ ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಎಂದಿನಂತೆ ಈ ಬಾರಿಯೂ ಕೂಡ ವಿದ್ಯಾರ್ಥಿನಿಯರೇ ಮೇಲು ಗೈ ಸಾಧಿಸಿದ್ದಾರೆ. ಈ ಬಾರಿ ಶೇ.71.93ರಷ್ಟು ಫಲಿತಾಂಶ ಬಂದಿದೆ. ರಾಜ್ಯದ 102 ಸರ್ಕಾರಿ ಶಾಲೆಗಳಲ್ಲಿ ಶೇ.100 ಕ್ಕೆ 100 ರಷ್ಟು ಫಲಿತಾಂಶ ಬಂದಿದೆ. 43 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲು ಗೈ ಸಾಧಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4.06ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಯಾದಗಿರಿಗೆ ಕೊನೆಯ ಸ್ಥಾನ ಸಿಕ್ಕಿದೆ.

Edited By

Manjula M

Reported By

Manjula M

Comments