ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಸುಪ್ರೀಂಗೆ ಪ್ರಮಾಣಪತ್ರ ಸಲ್ಲಿಕೆ..!

07 May 2018 3:52 PM | General
589 Report

ಈಗಿರುವ  ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯ ಇಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ.

ಸುಪ್ರೀಂಕೋರ್ಟ್ ಗೆ ಏಪ್ರಿಲ್ ಹಾಗೂ ಮೇ ತಿಂಗಳ ಬಾಕಿ ನೀರು ಹರಿಸುವಂತೆ ಸೂಚನೆ ನೀಡಿರುವ ವಿಚಾರಣೆ ನಾಳೆ ಬರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‍ಗೆ ಅಫಿಡೆವಿಟ್ ಸಲ್ಲಿಸಿರುವ ಕರ್ನಾಟಕ ಸರ್ಕಾರ ಈ ವೇಳೆಗೆ 104 ಟಿಎಂಸಿ ನೀರು ಬಿಡಬೇಕಿತ್ತು. ಈಗಾಗಲೇ 116 ಟಿಎಂಸಿ ನೀರು ಹರಿಸಿದ್ದೇವೆ. ಹೆಚ್ಚಿನ ಪ್ರಮಾಣದ ನೀರು ಹರಿದಿದೆ. ನಮ್ಮ ಜಲಾಶಯದಲ್ಲಿ 9 ಟಿಎಂಸಿ ನೀರು ಮಾತ್ರ ಬಾಕಿ ಇದೆ. ಮುಂದಿನ ಎರಡು ತಿಂಗಳು ಕಾಲ ನಗರ ಸೇರಿದಂತೆ ಇನ್ನಿತರೆ ಕಡೆ ನೀರಿನ ಅವಶ್ಯಕತೆ ಇರುವ ಕಾರಣ ನಾವು ನೀರು ಹರಿಸಲು ಸಾಧ್ಯವಿಲ್ಲ ಎಂಬುದು ಕರ್ನಾಟಕ ಸರ್ಕಾರ ವಕೀಲರ ವಾದವಾಗಿದೆ. ಈ ಸಲ ನಾವೇ ಕಷ್ಟದಲ್ಲಿವೆ. ಸಂಕಷ್ಟದ ಸಂದರ್ಭದಲ್ಲಿ ಸಂಕಷ್ಟದ ಸೂತ್ರವನ್ನು ಪಾಲಿಸಬೇಕಾಗಿದೆ ಎಂದು ಪ್ರಮಾಣ ಪತ್ರದಲ್ಲಿ ಸರ್ಕಾರ ಉಲ್ಲೇಖ ಮಾಡಲಾಗಿದೆ.

Edited By

Manjula M

Reported By

Manjula M

Comments