ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿಯ ಖಡಕ್ ಆರ್ಡರ್ ..! ಏನ್ ಗೊತ್ತಾ?

31 May 2018 5:54 PM | General
5667 Report

ಗೃಹ ಇಲಾಖೆಗೆ ಯಾವುದೇ ಸಲಹೆಗಾರರ ಅವಶ್ಯಕತೆ ಇಲ್ಲ. ಇಲಾಖೆಯಲ್ಲೇ ಸಾಕಷ್ಟು  ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ನಡೆದ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.

ಆ ಸಂದರ್ಭದಲ್ಲಿ ಅವರು ಇನ್ನು ನಾವೆಲ್ಲ  ಒಂದೇ ಕುಟುಂಬದಂತೆ ಕೆಲಸ ಮಾಡಬೇಕು. ಜನತೆಗೆ ವಿಶ್ವಾಸ ಬರುವ ರೀತಿ ಕೆಲಸ ಮಾಡಬೇಕು. ಯಾವುದೇ ಜಾತಿ ಆಧಾರದ ಮೇಲೆ ಕೆಲಸ ಮಾಡಬಾರದು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ . ಇದೇ ಸಮಯದಲ್ಲಿ ಸಭೆಯಲ್ಲಿ ಪೋಲೀಸ್​ ಇಲಾಖೆಯ ಕೆಲಸದಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪವನ್ನು ಮಾಡುವುದಿಲ್ಲ. ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಇಂತಹ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಇಂದು ನಡೆದ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಅವರು ರಾಜ್ಯದಲ್ಲಿ ಮಕ್ಕಳ ಅಪಹರಣ ಕುರಿತ ವದಂತಿ ಹಿನ್ನೆಲೆಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಇದಲ್ಲದೇ ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಲ್ಲಿ ಅರಿವುವನ್ನು ಮೂಡಿಸಲು ಕ್ರಮವನ್ನು ಕೂಡ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭ, ಹಿರಿಯ ಪೊಲೀಸ್ ಅಧಿಕಾರಿಗಳಾದ ಎಂ.ಎನ್. ರೆಡ್ಡಿ, ಪಿ.ಕೆ. ಗರ್ಗ್ ಮೊದಲಾದವರು ಉಪಸ್ಥಿತರಿದ್ದರು. ಅನೇಕ ಮಾಹಿತಿಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆಯನ್ನು ನಡೆಸಿದರು ಎನ್ನಲಾಗಿದೆ.

 

Edited By

Manjula M

Reported By

Manjula M

Comments