ಅಪ್ಪಾಜಿ ಕ್ಯಾಂಟೀನ್‍ ಪ್ರಾರಂಭಕ್ಕೆ ಬೇಡಿಕೆ ಇಟ್ಟ ಜೆಡಿಎಸ್ ನಾಯಕಿ ಯಾರ್ ಗೊತ್ತಾ?

07 Jun 2018 4:47 PM | General
14481 Report

ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಿ ಸುಮಾರು ತಿಂಗಳುಗಳೆ ಕಳೆದವು. ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ನಗರದಲ್ಲಿ ಇನ್ನೂ ಹೆಚ್ಚು ಅಪ್ಪಾಜಿ ಕ್ಯಾಂಟೀನ್ ಆರಂಭಿಸುವಂತೆ ಜೆಡಿ ಎಸ್ ಒತ್ತಾಯವನ್ನು ಮಾಡುತ್ತಿದೆ. ನಗರದಲ್ಲಿ ಈಗ ಎರಡು ಕಡೆ ಮಾತ್ರ ಅಪ್ಪಾಜಿ ಕ್ಯಾಂಟೀನ್‍ಗಳಿವೆ. ಇವುಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಾಗಾಗಿ ನಗರದ ಬೇರೆ ಕಡೆಯೂ ಕೂಡ ಅಪ್ಪಾಜಿ ಕ್ಯಾಂಟೀನ್ ಆರಂಭಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿಯ ಜೆಡಿಎಸ್ ಗುಂಪಿನ ನಾಯಕಿ ನೇತ್ರ ನಾರಾಯಣ್ ಹೇಳಿದ್ದಾರೆ. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ 198 ವಾರ್ಡ್‍ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯು ಸಿಕ್ಕಿದೆ. ಈ ಬಾರಿ ಜೆಡಿಎಸ್,ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿ ಇರುವುದರಿಂದ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿಯೇ ಬಡವರು ಹೆಚ್ಚು ಇರುವ ಪ್ರದೇಶಗಳನ್ನು ಗುರುತಿಸಿ ಅಪ್ಪಾಜಿ ಕ್ಯಾಂಟೀನ್ ಆರಂಭಿಸಬೇಕು  ಎಂದು ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments