ತನ್ನ ಹೆಸರು ಬಳಸಿಕೊಂಡು ಕೆಟ್ಟ ಕೆಲಸ ಮಾಡಿದವರಿಗೆ ಡಿ ಬಾಸ್ ಕೊಟ್ರು ಖಡಕ್ ವಾರ್ನಿಂಗ್..!

13 Jun 2018 5:19 PM | General
206 Report

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಇಷ್ಟ ಬಂದಂತೆ ಪೋಸ್ಟ್ ಹಾಕುವವರು ಹೆಚ್ಚಾಗಿದ್ದಾರೆ. ಟ್ರೋಲ್ ಮಾಡುವವರು ಕೂಡ ಹೆಚ್ಚಾಗಿದ್ದಾರೆ. ಅಷ್ಟೇ ಅಲ್ಲದೆ ಸ್ಟಾರ್ ನಟ-ನಟಿಯರ ಹೆಸರನ್ನ ಬಳಸಿಕೊಂಡು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಸಮಸ್ಯೆ ಹುಟ್ಟು ಹಾಕುತ್ತಿದ್ದಾರೆ.. ಈಗ ಇಂಥದೊಂದು ಸಮಸ್ಯೆ ಎದುರಾಗಿರೋದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ.

ದರ್ಶನ್ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಸಿ ಎಂ ಕುಮಾರಸ್ವಾಮಿ ಅವರನ್ನು ಅವಹೇಳನ ಮಾಡಿರುವಂತಹ ವಿಚಾರ  ತಿಳಿದು ಬಂದಿತ್ತು. ಈ ವಿಚಾರವು ಸುದ್ದಿ ಆಗುತ್ತಿದ್ದಂತೆ ದರ್ಶನ್ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಈ ವಿಷಯದ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇತ್ತೀಚಿಗೆ ತಿಳಿದು ಬಂದಿರುವಂತೆ ನನ್ನ ಹೆಸರಲ್ಲಿ  ಕಿಡಿಗೇಡಿಗಳು ಅನೇಕ ನಕಲಿ ಫೇಸ್ ಬುಕ್ ಖಾತೆಗಳನ್ನು ತೆರೆದಿದ್ದಾರೆ.. ಈ ಖಾತೆಗಳಿಂದ ಕೆಲವು ವ್ಯಕ್ತಿಗಳ ಮೇಲೆ ಅವಹೇಳನಕಾರಿ ಹೇಳಿಕೆಗಳು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಸೈಬರ್ ಕ್ರೈಂ ಡಿಪಾರ್ಟ್ಮೆಂಟ್ ಈ ರೀತಿ ಸೋಶಿಯಲ್ ಮೀಡಿಯಾ ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈ ಕೊಳ್ಳುವುದಾಗಿ ಹೇಳಿದ್ದಾರೆ. ದಯಮಾಡಿ ಯಾರೂ ಇಂತಹ ಕೆಲಸಗಳಲ್ಲಿ ತೊಡಗಬೇಡಿ ಎಂದು ಕಳಕಳಿಯ ವಿನಂತಿ" ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments