ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

28 Jun 2018 12:49 PM | General
960 Report

ಮೈಸೂರಿನ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 39
ಹುದ್ದೆಗಳ ವಿವರ 
ಸೇವಕ ಹುದ್ದೆ
ವಿದ್ಯಾರ್ಹತೆ : 7ನೇ ತರಗತಿ ಅಥವಾ ಇದಕ್ಕೆ ಸಮನಾದ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ 18 ರಿಂದ 35 ವರ್ಷ ವಯೋಮಿತಿ, . 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆಯನ್ನು ನೀಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗದವರಿಗೆ 200 ರೂ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ವರ್ಗದವರಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-07-2018

ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಕಂಡ ವೆಬ್ ಸೈಟ್ ವಿಳಾಸ http://ecourts.gov.in/mysuru/online-recruitment ಗೆ ಭೇಟಿ ನೀಡಿ.

Edited By

Manjula M

Reported By

Manjula M

Comments