ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್..!

02 Jul 2018 5:44 PM | General
92744 Report

ಇತ್ತಿಚಿಗೆ ಸರ್ಕಾರವು ನಾನಾ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ, ಶಿಕ್ಷಣಕ್ಕಾಗಿ, ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ರಾಜ್ಯದ ಎಲ್ಲ ವರ್ಗಗಳಿಗೂ ಕೂಡ ಅನುಕೂಲವಾಗಲಿ ಎಂದು ಸರ್ಕಾರವು  ಆರೋಗ್ಯ ಕರ್ನಾಟಕ ಯೋಜನೆಯನ್ನು ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಜಾರಿಗೆ ತಂದಿತ್ತು, ರಾಜ್ಯದಲ್ಲಿ ಶ್ರೀಮಂತರಿಗೆ ಸಿಗುವ ಎಲ್ಲಾ ರೀತಿಯ ವೈದ್ಯಕಿಯ ಸೇವೆಗಳು ಜನ ಸಾಮಾನ್ಯರಿಗೂ ತಲುಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಇದೀಗ ಮೈತ್ರಿ ಸರ್ಕಾರವು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದಂತಹ ಆರೋಗ್ಯ ಕರ್ನಾಟಕ ಕಾರ್ಯಕ್ರಮವನ್ನು ಮುಂದುವರೆಸಿಕೊಂಡು ಹೋಗುವುದಕ್ಕೆ ತೀರ್ಮಾನ ಮಾಡಿದೆ ಎಂದು ರಾಜ್ಯಪಾಲ ವಜುಬಾಯಿವಾಲವರು ತಿಳಿಸಿದ್ದಾರೆ. ಇಂದು ಮೈತ್ರಿ ಸರ್ಕಾರದ ಮೊದಲ ಜಂಟಿ ಅಧಿವೇಶನ ಕುರಿತು ಮಾಡಿದ ಭಾಷಣದಲ್ಲಿ ಈ ವಿಷಯದ ಬಗ್ಗೆ ಮಾಹಿತಿಯನ್ನು ತಿಳಿಸಿದ್ದಾರೆ. ಇದೇ ವೇಳೆ ಅವರು ದೇಶದಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು. ಈ ಯೋಜನೆಯಲ್ಲಿ ರಾಜ್ಯದ ಎಲ್ಲಾ ಕುಟುಂಬಕ್ಕೆ 1.5 ಲಕ್ಷ ರೂಪಾಯಿ ವರೆಗಿನ ವೈದ್ಯಕೀಯ ವೆಚ್ಚವನ್ನ ಸರ್ಕಾರವೇ ಭರಿಸುವ ಮೂಲಕ ಸಾಮಾನ್ಯ ಜನರ ಆರೋಗ್ಯ ಭದ್ರತೆಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎನ್ನಲಾಗಿದೆ. ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರಿ ಹಾಗೂ ಖಾಸಗಿ  ಆಸ್ಪತ್ರೆಗಳಲ್ಲಿ 1.5 ಲಕ್ಷ ರೂಪಾಯಿ ವರೆಗಿನ ಚಿಕಿತ್ಸೆ ಉಚಿತವಾಗಿರಲಿದೆ ಅಲ್ಲದೆ ಹೆಚ್ಚುವರಿಯಾಗಿ 50 ಸಾವಿರ ರೂಪಾಯಿಗಳ ಚಿಕಿತ್ಸೆ ನೀಡಲಿದೆ. ಒಟ್ಟಿನಲ್ಲಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರದಲ್ಲಿ ಒಂದು ಮಹತ್ವದ ಯೋಜನೆಯು ಜಾರಿಗೆ ಬರುವಂತೆ ಮಾಡಿರುವುದು ಸಾಮಾನ್ಯ ಜನರಲ್ಲಿ ಮಂದವಾಸ ಮಾಡುವಂತೆ ಮಾಡಿದೆ.

Edited By

Manjula M

Reported By

Manjula M

Comments