ಗುಡ್ ನ್ಯೂಸ್ : ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿ..! ಹೇಗೆ ಅಂತಿರಾ..?

12 Jul 2018 5:00 PM | General
439 Report

ಇದೀಗ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ಈ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿಯು ಸಿಗಲಿದೆ ಎಂದು ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ಇಂತಹ ಯೋಜನೆಯನ್ನು ಪ್ರಾಯೋಗಿಕವಾಗಿಯೇ ಜಾರಿಗೆ ತರುತ್ತಿದೆ. 2018-19ನೇ ಸಾಲಿನಿಂದ ರಾಜ್ಯದ 250 ಪಿಯುಸಿ ಕಾಲೇಜುಗಳಲ್ಲಿ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುತ್ತದೆ ಎನ್ನಲಾಗುತ್ತಿದೆ. ಸಿಇಟಿ, ನೀಟ್, ಜೆಇಇ ಮುಂತಾದ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಆನ್‌ಲೈನ್ ಮೂಲಕ ತರಗತಿಗಳು ನಡೆಯಲಿದ್ದು, ತಜ್ಞರು ಬೇರೆ ಕಡೆ ಕುಳಿತು ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ. ಪ್ರತಿ ಬಾರಿ ತಜ್ಞರ ಪಾಠ ಮುಕ್ತಾಯಗೊಂಡ ಬಳಿಕ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಅವಕಾಶ ಕಲ್ಪಿಸಲಾಗಿದೆ. ಪ್ರತಿ ವಾರ ವಿದ್ಯಾರ್ಥಿಗಳಿಗೆ 6 ತರಗತಿಗಳನ್ನು ಮಾಡಲಾಗುತ್ತದೆ. ಗ್ರಾಮೀಣ ಭಾಗದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸಹಾಯಕವಾಗಲಿ ಎಂದು ಇಂತಹ ತರಬೇತಿ ನಡೆಸಲಾಗುತ್ತಿದೆ. ಈ ತರಬೇತಿಯಿಂದಾಗಿ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶಾತಿಯೂ ಹೆಚ್ಚಳವಾಗಲಿದ್ದು, ವಿದ್ಯಾರ್ಥಿಗಳಿಗೆ ಸ್ಮರ್ಧಾತ್ಮಕ ಪರೀಕ್ಷೆ ಬರೆಯಲು ಸಹಾಯಕವಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Edited By

Manjula M

Reported By

Manjula M

Comments