ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಸಚಿವರಿಂದ ಸಿಕ್ತು 'ಗುಡ್ ನ್ಯೂಸ್'

13 Jul 2018 9:46 AM | General
450 Report

ಶಿಕ್ಷಣ ಸಚಿವ ಎನ್.ಮಹೇಶ್ ಅವರು  ವರ್ಗಾವಣೆ ನಿರೀಕ್ಷೆಯಲ್ಲಿದ್ದಂತಹ ಶಿಕ್ಷಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ನು 15 ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಬಿಜೆಪಿಯ ತಾರಾ ಅನುರಾಧ ಅವರು ವಿಧಾನಪರಿಷತ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವರ್ಗಾವಣೆಗೆ ತಡೆಯಾಜ್ಞೆ ಕೋರಿ ನ್ಯಾಯಾಲಯದಲ್ಲಿ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 3 ಇತ್ಯರ್ಥಗೊಂಡಿದ್ದು, ಇನ್ನು 7 ಪ್ರಕರಣಗಳು ಒಂದೆರಡು ದಿನಗಳಲ್ಲಿ ಇತ್ಯರ್ಥಗೊಳ್ಳಲಿವೆ ಎಂದು ತಿಳಿಸಿದರು. ಕೋರಿಕೆಯ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಕನಿಷ್ಠ ಸೇವಾವಧಿಯನ್ನು ಐದು ವರ್ಷಗಳಿಂದ ಮೂರು ವರ್ಷಗಳಿಗೆ ಇಳಿಸಲಾಗಿದೆ ಎಂದು ಹೇಳಿರುವ ಶಿಕ್ಷಣ ಸಚಿವರು, ಕಡ್ಡಾಯ ವರ್ಗಾವಣೆಯಲ್ಲಿ ಕ್ಯಾನ್ಸರ್ ಮತ್ತು ಡಯಾಲಿಸಿಸ್ ಗೆ ಒಳಗಾಗಿರುವವರಿಗೆ ನೀಡಲಾಗುವುದು ಎಂಬ ಮಾಹಿತಿಯನ್ನು ನೀಡಿದ್ದಾರೆ.

Edited By

Manjula M

Reported By

Manjula M

Comments