ನಿಮಗೆ 18 ವರ್ಷ ತುಂಬಿದ್ಯಾ..? ಹಾಗಾದ್ರೆ ರಾಜ್ಯ ಸರ್ಕಾರದಿಂದ ಸಿಕ್ತು ಅನ್ಕೊಳ್ಳಿ ಈ ಬಂಪರ್ ಆಫರ್..!

16 Jul 2018 3:59 PM | General
21063 Report

ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟಂತಹ  ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ..

ಒಟ್ಟು 53 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇದ್ದು puc ಅಥವಾ CBSC ಅಲ್ಲಿ ತೇರ್ಗಡೆಯಾಗಿರಬೇಕು , ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನಿಷ್ಠ ೧೮ ವರ್ಷ ತುಂಬಿರಲೇಬೇಕು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 35 ವರ್ಷ ಹಾಗೂ  2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ ಮತ್ತು ಪ್ರವರ್ಗ1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 40 ವರ್ಷ ನಿಗದಿ ಮಾಡಲಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 200 ರೂ, ಪ್ರವರ್ಗ1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಾಗೂ ಮಹಿಳೆ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.ಆಸಕ್ತಿಯುಳ್ಳ ಅಭ್ಯರ್ಥಿಯು ಮುಂದಿನ ಆಗಸ್ಟ್ 10 ರ ಒಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು ಹಾಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ಕೊಡಿ. http://bidar.nic.in ಅಥವಾ http://bidar-va.kar.nic.in ಗೆ ಭೇಟಿ ನೀಡಿ.

Edited By

Manjula M

Reported By

Manjula M

Comments