ಆರೋಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ..! ನಿಮ್ಮದಾಗಿಸಿಕೊಳ್ಳಿ 5 ಲಕ್ಷ..! ಹೇಗೆ ಅಂತೀರಾ?

03 Aug 2018 10:08 AM | General
4246 Report

ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸೆಯ ವೆಚ್ಚವನ್ನು ಐದು ಲಕ್ಷ ರೂ.ವರೆಗೆ ಹೆಚ್ಚಿಸುವ ಚಿಂತನೆಯಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಅವರು, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಮೊತ್ತವನ್ನು ಐದು ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದರು. ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಪ್ರಸ್ತುತ 1.50 ಲಕ್ಷ ರೂ. ಚಿಕಿತ್ಸಾ ವೆಚ್ಚ ಮಿತಿಯಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಬಗ್ಗೆ ವೈದ್ಯರು ದೃಢೀಕರಿಸಿದರೆ 50 ಸಾವಿರ ರೂ. ಹೆಚ್ಚುವರಿಯಾಗಿ ನೀಡಲು ಅವಕಾಶವಿದೆ. ಹೀಗಾಗಿ, ನಮ್ಮಲ್ಲೂ 5 ಲಕ್ಷ ರೂ. ವರೆಗೆ ಹೆಚ್ಚಿಸಬೇಕೆಂಬ ಬೇಡಿಕೆಯಿದೆ. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದರು.

Edited By

Shruthi G

Reported By

Shruthi G

Comments

Cancel
Done