ನಿಮ್ಮ ಮನೆಯಲ್ಲಿ ಹೆಣ್ಣು ಮಗು ಇದ್ಯಾ? ಹಾಗಾದ್ರೆ ಸರ್ಕಾರದ ಈ ಬಂಪರ್ ಯೋಜನೆಯನ್ನು ಪಡೆದುಕೊಳ್ಳಿ..!!

04 Aug 2018 5:21 PM | General
2595 Report

ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ, ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ, ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.

ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ‘ಸುಕನ್ಯಾ ಸಮೃದ್ಧಿ’ ಉಳಿತಾಯ ಖಾತೆಯನ್ನು ತೆರೆಯಬಹುದಾಗಿದೆ, ಈ ಖಾತೆ ಆರಂಭಗೊಂಡ ದಿನದಿಂದ 21 ವರ್ಷಗಳವರೆಗೆ ಚಾಲ್ತಿಯಲ್ಲಿ ಇರುತ್ತದೆ. ಇದೊಂದು ದೀರ್ಘಕಾಲಿನ ಉಳಿತಾಯ ಖಾತೆಯಾಗಿದೆ, ಸುಕನ್ಯಾ ಸಮೃದ್ಧಿ ಉಳಿತಾಯ ಖಾತೆಯು ಆರಂಭಗೊಂಡ ದಿನದಿಂದ 21 ವರ್ಷದವರೆಗೂ ಚಾಲ್ತಿಯಲ್ಲಿರುತ್ತದೆ, ಯಾವ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆ ತೆರೆಯಲಾಗಿದೆಯೋ ಆಕೆಗೆ 18 ವರ್ಷ ಪೂರ್ಣಗೊಂಡ ನಂತರ, ಆಕೆಯು ತನ್ನ ಖಾತೆಯಲ್ಲಿ ಜಮಾ ಆದ ಹಣದಲ್ಲಿ ಅರ್ಧ ಭಾಗವನ್ನು ಉನ್ನತ ಶಿಕ್ಷಣ, ಮದುವೆಯ ಉದ್ದೇಶಕ್ಕೆ ಬಳಸಬಹುದು.

ಸರ್ಕಾರಿ ಮತ್ತು ಖಾಸಗಿ ವಾಣಿಜ್ಯೋದ್ಯಮ ಸಂಸ್ಥೆಗಳ ನೌಕರರು, ವ್ಯಾಪಾರ, ಸ್ವಂತ ಉದ್ದಿಮೆ ಸೇರಿದಂತೆ ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಬಹುದು. ಸುಕನ್ಯಾ ಸಮೃದ್ಧಿ ಖಾತೆ ತೆರೆಯಲು ಆರಂಭಿಕ ಠೇವಣಿ 1000 ರೂ ಪ್ರತಿವರ್ಷ ಖಾತೆಗೆ ಕನಿಷ್ಠ 1000 ರೂ. ಜಮಾ ಮಾಡಬೇಕು, ಪ್ರತಿ ಹಣಕಾಸು ವರ್ಷದಲ್ಲಿ 1000 ರೂ.ನಿಂದ ಗರಿಷ್ಠ 1.5 ಲಕ್ಷ ರೂ ವರೆಗೆ ಜಮಾ ಮಾಡಲು ಅವಕಾಶವಿದೆ. ಹೂಡಿಕೆ ಮಾಡಿದ ಮೊತ್ತಕ್ಕೆ ವಾರ್ಷಿಕವಾಗಿ ಬಡ್ಡಿ, ಚಕ್ರಬಡ್ಡಿ ನೀಡಲಾಗುತ್ತದೆ, ಆದರೆ ಈಗ ಬಂದಿರುವ ಹೊಸ ಸುದ್ದಿ ಏನೆಂದರೆ ಈ ಆರಂಭಿಕ ಮೊತ್ತದಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಮಾಡಲಾಗಿದೆ. ದೇಶಾದ್ಯಂತ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರು ಆರಂಭಿಸಿದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಮತ್ತಷ್ಟು ಜನರಿಗೆ, ಅದರಲ್ಲೂ ಬಡಜನತೆಗೆ ಕೈಗೆಟುಕುವಂತೆ ಮಾಡಲು ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ಯೋಜನೆಯಡಿ ವಾರ್ಷಿಕ ಕಡ್ಡಾಯವಾಗಿ ಕಟ್ಟಬೇಕಾಗಿದ್ದ ಕನಿಷ್ಠ ಠೇವಣಿ ಮೊತ್ತವನ್ನು ಈವರೆಗೂ ಇದ್ದ 1,000 ರೂ.ನಿಂದ 250 ರೂ.ಗೆ ಇಳಿಸಲಾಗಿದೆ, ಪ್ರತಿ 3 ತಿಂಗಳಿಗೊಮ್ಮೆ ಬಡ್ಡಿದರ ಪರಿಷ್ಕರಣೆ, ಪ್ರಸ್ತುತ ತ್ರೈಮಾಸಿದಲ್ಲಿ 8.1% ಬಡ್ಡಿದರವಿದೆ.

Edited By

Shruthi G

Reported By

Shruthi G

Comments