ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

11 Aug 2018 11:52 AM | General
587 Report

ಚಿಕ್ಕಮಗಳೂರು ಜಿಲ್ಲೆಗೆ 19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 77 ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 96
ಹುದ್ದೆಗಳ ವಿವರ 
ಅಂಗನವಾಡಿ ಕಾರ್ಯಕರ್ತೆ - 19
ಅಂಗನವಾಡಿ ಸಹಾಯಕಿ - 77
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿ  ಹುದ್ದೆಗೆ ಕನಿಷ್ಠ 4 ನೆ ತರಗತಿ, ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯದಿನಾಂಕ31-08-2018... ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.anganawadirecruitment.kar.nic.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.

Edited By

Manjula M

Reported By

Manjula M

Comments