ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಹೆಚ್'ಡಿ.ಕೆ

17 Aug 2018 11:37 AM | General
231 Report

ನಮ್ಮ ದೇಶ ಕಂಡಂತಹ  ಅಪರೂಪದ ರಾಜಕಾರಣಿಯಾದ ಅಟಲ್ ಬಿಹಾರಿ ವಾಜಪೇಯಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ ನಿಧನರಾಗಿದ್ದಾರೆ.

ವಾಜಪೇಯಿ ಅವರ ನಿಧನಕ್ಕೆ ರಾಜ್ಯದ ಗಣ್ಯಾತೀಗಣ್ಯರು ಸಂತಾಪವನ್ನು ಸೂಚಿಸಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ದೆಹಲಿಗೆ ಹೋಗಲಿದ್ದಾರೆ. ಹೆಚ್.ಎ.ಎಲ್ ಏರ್ ಪೋರ್ಟ್ ನಿಂದ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿ ವಾಜಪೇಯಿಯವರ ಅಂತಿಮ ದರ್ಶನವನ್ನು ಪಡೆಯಲಿದ್ದಾರೆ.

Edited By

Manjula M

Reported By

Manjula M

Comments