ಅಶ್ವತ್ಥ ವೃಕ್ಷವನ್ನು ಪೂಜೆ ಮಾಡುವುದು ಏಕೆ? ಇಲ್ಲಿದೆ ನೋಡಿ ವೈಜ್ಞಾನಿಕ ಕಾರಣ

01 Sep 2018 12:14 PM | General
599 Report

“ಅರಳಿ ಮರ” ಅಥವಾ ಅಶ್ವತ್ಥ ವೃಕ್ಷ ಎಂದು ಕರೆಯಲ್ಪಡುವ ಮರವನ್ನು ನಾವು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ನಾಗರ ಕಟ್ಟೆ, ಅಶ್ವತ್ಥ ಕಟ್ಟೆ, ದೇವಾಲಯಗಳ ಬಳಿಯಲ್ಲಿ ಕಾಣುತ್ತೇವೆ. ನಿಜ ಹೇಳಬೇಕೆಂದರೆ ಇದು ಸಾಮಾನ್ಯ ಮನುಷ್ಯರಿಗೆ ನೆರಳನ್ನು ಬಿಟ್ಟರೆ ಬೇರೇನು ನೀಡುವುದಿಲ್ಲ.

ಈ ಮರ ರುಚಿಕರವಾದ ಹಣ್ಣು ನೀಡುವುದಿಲ್ಲ. ಆದರೂ ಒಬ್ಬ ಸಾಮಾನ್ಯ ಹಳ್ಳಿಯವರು ಅಥವಾ ಜನರು ಸಹ ಇದನ್ನು ಬೆಳೆಸಿ, ಪೋಷಿಸಿ, ಇದರ ರಕ್ಷಣೆಗೆ ನಿಂತಿರುತ್ತಾರೆ. ಹಾಗಾದರೆ ಈ ಮರದಲ್ಲಿ ಅಂತಹ ವಿಶೇಷ ಏನಿದೆ? ಹೌದು. ಸಾಕಷ್ಟು ವಿಶೇಷತೆಗಳಿವೆ. ಅದನ್ನೇ ನಮ್ಮ ಪೂರ್ವಿಕರು ಕಂಡು ಹಿಡಿದಿದ್ದು, ಈ ಮರವು ರಾತ್ರಿ ಸಮಯದಲ್ಲಿ ಸಹ ಆಮ್ಲಜನಕ ಬಿಡುಗಡೆ ಮಾಡುವ ಗುಣವನ್ನು ಹೊಂದಿದೆ. ಇಂತಹ ಮರ ಮನುಕುಲಕ್ಕೆ ಅತ್ಯಾವಶ್ಯಕ ಎಂದು ಪರಿಗಣಿಸಿಯೇ, ಅಶ್ವತ್ಥ ವೃಕ್ಷಕ್ಕೆ ಇದಕ್ಕೆ ತ್ರಿಮೂರ್ತಿಗಳ ಆವಾಸ ಸ್ಥಾನವೆಂದು ಕರೆದು ಇದನ್ನು ಪೂಜಿಸಲು ತಿಳಿಸಿದ್ದಾರೆ.

Edited By

Manjula M

Reported By

Manjula M

Comments