ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು ಬಂದ್ ಗೆ ಬೆಂಬಲ..!!

08 Sep 2018 5:34 PM | General
230 Report

ಸೋಮವಾರ ಕಾಂಗ್ರೆಸ್ ಕರೆ ನೀಡಿದ ಭಾರತ್ ಬಂದ್‍ಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘಟನೆ ಬೆಂಬಲ ನೀಡಿದ್ದರಿಂದ ಸಾರಿಗೆ ಸಂಚಾರ ಸ್ತಬ್ಧವಾಗಲಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ತೈಲ ಬೆಲೆಗಳು ಹೇರುತ್ತಿದ್ದರು, ಕೇಂದ್ರ ಸರಕಾರ ಯಾವುದೇ ರೀತಿ ನಿರ್ಧಾರ ಕೈಗೊಳ್ಳದೇ ಸುಮನಿರುವುದು ಮತ್ತು ಕೆಲವು ಬಿಜೆಪಿ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿವೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್‍ಗೆ ಕರೆ ನೀಡಿದೆ ಇದಕ್ಕೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು ಬೆಂಬಲ ಸೂಚಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಬಹಳ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ 10 ಬಾರಿ ಬೆಲೆ ಏರಿಸಿದೆ. ಇದರಿಂದ ಮಧ್ಯಮ ವರ್ಗದ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು.

Edited By

venki swamy

Reported By

venki swamy

Comments