ಹಿರಿಯ ಪತ್ರಕರ್ತರಾದ ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

22 Sep 2018 11:27 AM | General
344 Report

ಹಿರಿಯ ಪತ್ರಕರ್ತರಾದ ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿದೆ. ಶುಕ್ರವಾರ ರಾತ್ರಿ ರವಿ ಬೆಳಗೆರೆ ಅವರಿಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಹಿರಿಯ ಪತ್ರಕರ್ತರಾದ ರವಿ ಬೆಳಗೆರೆ ಅವರು ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೆಲ ತಿಂಗಳಿಂದ ಅಷ್ಟೇ ರವಿ ಬೆಳಗೆರೆ ಅವರು ಇದೇ ಹೃದಯ ಸಂಬಂಧಿ ಕಾಯಿಲೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಂಡುಬಂದಿದೆ.

Edited By

Manjula M

Reported By

Manjula M

Comments