ರಾಜ್ಯದಲ್ಲಿ ಮತ್ತೆ ಶುರುವಾಗಲಿದೆ ವರುಣನ ಆರ್ಭಟ

24 Sep 2018 10:00 AM | General
1051 Report

ಈಗಾಗಲೇ ಅತಿವೃಷ್ಟಿಗೆ ಒಳಗಾಗಿದ್ದ  ಕೊಡಗು ಮತ್ತು ಕೇರಳ ಈಗಷ್ಟೆ ಸಹಜ ಸ್ಥಿತಿಗೆ ಮರಳುತ್ತಿದೆ. ಇದೀಗ  ರಾಜ್ಯಾದ್ಯಂತ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಾದ್ಯಂತ ಒಂದು ವಾರಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಸೋಮವಾರದಿಂದ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಹಲವೆಡೆ ಮಾತ್ರ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿ ಚನ್ನಬಸಪ್ಪ ಎಸ್. ಪಾಟೀಲ್ ತಿಳಿಸಿದ್ದಾರೆ.

Edited By

Manjula M

Reported By

Manjula M

Comments