ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅಸ್ತು ಎಂದ ಸುಪ್ರೀಂಕೋರ್ಟ್

28 Sep 2018 11:53 AM | General
351 Report

ಇಂದು ಸುಪ್ರೀಂಕೋರ್ಟ್ ಮತ್ತೊಂದು ಐತಿಹಾಸಿಕ ತೀರ್ಪುನ್ನು ನೀಡಿದೆ.. ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ಇದೆ ಎಂಬ ಆದೇಶವನ್ನು ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ  ಜಸ್ಟಿಸ್ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಕುರಿತು ಶುಕ್ರವಾರ ಐತಿಹಾಸಿಕ ತೀರ್ಪುನ್ನು ಪ್ರಕಟಿಸಿದ್ಧಾರೆ.

ಇಂಡಿಯನ್ ಯಂಗ್ ಲಾಯರ್ಸ್‌ ಅಸೋಸಿಯೇಶನ್ 10 ಹಾಗೂ 50 ವಯಸ್ಸಿನ ನಡುವಿನ ಮಹಿಳೆಯರು ಶಬರಿ ಮಲೆ ದೇವಸ್ಥಾನ ಪ್ರವೇಶಿಸಲು ನಿಷೇಧ ಹೇರಿದ್ದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ 2006ರ ಜನವರಿ 11 ರಂದು ಸಲ್ಲಿಕೆಯಾಗಿದ್ದು ಒಂದು ದಶಕದ ಬಳಿಕ 2016ರ ಜನವರಿ 11 ರಂದು ನ್ಯಾಯಾಲಯ ಪಿಐಎಲ್ ವಿಚಾರಣೆಯನ್ನು ನಡೆಸಿತ್ತು. ಆಗಸ್ಟ್ 1 ರಂದು ಅಂತಿಮ ತೀರ್ಪನ್ನು ಕಾಯ್ದಿರಿಸಿತ್ತು. ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಕ್ಕೆ ಅಸ್ತು ಎಂದಿರುವ ಸುಪ್ರೀಂಕೋರ್ಟಿನ ತೀರ್ಪಿನ ಪುನರ್‌ಪರಿಶೀಲನೆಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ.

Edited By

Manjula M

Reported By

Manjula M

Comments