ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! 10 ಲಕ್ಷದ ತನಕ ಸಿಗಲಿದೆ ಸಾಲ..!! ಯಾರ್ಯಾರಿಗೆ ಸಾಲ ಸೌಲಭ್ಯ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

06 Oct 2018 9:36 AM | General
13258 Report

 ರಾಜ್ಯ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ನೀಡಿದೆ.. ವಿದ್ಯಾರ್ಥಿಗಳಿಗೂ ಕೂಡ ಯೋಜನೆಗಳನ್ನು ನೀಡಿದೆ. ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಒಬಿಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತೆ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣಕ್ಕೆ ಅರಿವು ಯೋಜನೆಯಡಿಯಲ್ಲಿ 2 ಲಕ್ಷ ರೂ.ನಿಂದ 10 ಲಕ್ಷ ರೂ. ವರೆಗೆ ಶೈಕ್ಷಣಿಕ ಸಾಲ ಸೌಲಭ್ಯ ನಿಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ರಾಜ್ಯದಲ್ಲಿ ಶೇ. 52 ರಷ್ಟು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿದ್ದು, ಕೇವಲ 3,027 ಕೋಟಿ ರೂ. ಮಾತ್ರ ಅನುದಾನ  ಇದೆ. ಆದರೆ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳು ಶೇ. 22 ರಷ್ಟಿದ್ದು, 29 ಸಾವಿರ ಕೋಟಿ ರೂ. ಅನುದಾನ ಇದೆ. ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ದೊಡ್ಡ ಖಾತೆಯಾದರೂ ಅನುದಾನ ಕಡಿಮೆ ಎಂದರು.ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಎಂಜಿನಿಯರಿಂಗ್, ಮೆಡಿಕಲ್, ನರ್ಸಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರ ಸಾಲ ಸೌಲಭ್ಯ ಕಲ್ಪಿಸುತ್ತಿದೆ. ಅಲ್ಲದೇ ಐಎಎಸ್ ಮತ್ತು ಕೆಎಸ್ ಪರೀಕ್ಷೆಗೆ ತರಬೇತಿ ಹಾಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು..

Edited By

Manjula M

Reported By

Manjula M

Comments