ಬಸ್ ಪ್ರಯಾಣಿಕರಿಗೆ ಸದ್ಯಕ್ಕೆ ರಿಲೀಫ್: ಉಪ ಚುನಾವಣೆ ಮುಗಿಯುವವರೆಗೂ ಬಸ್ ದರ ಏರಿಕೆ ಇಲ್ಲ

11 Oct 2018 3:17 PM | General
49 Report

ಕೆಲವೊಂದು ಕಾರಣಾಂತರಗಳಿಂದ ಎರಡು ಬಾರಿ ಮುಂದಕ್ಕೆ ಹಾಕಿದ  ಸಾರಿಗೆ ಬಸ್ ದರ ಏರಿಕೆಯನ್ನು ಉಪ ಚುನಾವಣೆ ಮುಗಿಯುವವರೆಗೂ ಮುಂದಕ್ಕೆ ಹಾಕಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಹಲವು ಸುತ್ತಿನ ಮಾತುಕತೆಯ ನಂತರ ಈ ವಾರಾಂತ್ಯದಲ್ಲಿ ಬಸ್ ದರ ಏರಿಕೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಲಾಗಿದೆ ಎನ್ನಲಾಗಿದೆ.

ದಿನದಿಂದ ದಿನಕ್ಕೆ ಇಂಧನ ದರ ಏರಿಕೆಯಿಂದ ಆಗುತ್ತಿರುವ ನಷ್ಟದ ಪ್ರಮಾಣವನ್ನು ಸರಿದೂಗಿಸಲು ಪ್ರಯಾಣದರ ಏರಿಕೆ ಅನಿವಾರ್ಯವಾಗಿದೆ. ಆದ್ದರಿಂದ ಪ್ರಯಾಣ ದರ ಏರಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುತ್ತೆವೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments