ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ..?!

22 Oct 2018 5:32 PM | General
387 Report

ರಾಜ್ಯ ಸರ್ಕಾರವು ಈಗಾಗಲೇ ಅನೇಕ ಸೌಲಭ್ಯಗಳನ್ನು ನೀಡಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಲು ಸಿದ್ದತೆ ನಡೆಸಿದೆ ಎಂದು ಹೇಳಲಾಗುತ್ತಿದೆ..ರೈತರ ಸಾಲಮನ್ನಾದ ಹಿನ್ನಲೆಯಲ್ಲಿಯೇ  ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡಲಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ಚಿಂತನೆಯನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರಿಂದ ರಾಜ್ಯ ಸರ್ಕಾರದ ವಿವರ ಕೇಳಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯಿಂದಲೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಕುಮಾರಸ್ವಾಮಿ ಸರ್ಕಾರದಿಂದ ಎಲ್ಲರಿಗೂ ಒಳ್ಳೆಯದೆ ಆಗಲಿದೆ.

Edited By

Manjula M

Reported By

Manjula M

Comments