SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಮಾರ್ಚ್’ನಿಂದ ಪರೀಕ್ಷೆ ಆರಂಭ

31 Oct 2018 9:44 AM | General
446 Report

ಎಸ್ ಎಸ್ ಎಲ್ ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ತರವಾದ ತಿರುವನ್ನು ಪಡೆದುಕೊಳ್ಳುತ್ತದೆ.  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದು, 2019ರ ಮಾ. 21ರಿಂದ ಏಪ್ರಿಲ್‌ 4ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷೆ ಬರೆಯುವ ಮಕ್ಕಳು ಈಗಾಗಲೇ ಪರೀಕ್ಷೆಗೆ ಬೇಕಾದ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಅಭ್ಯರ್ಥಿಗಳು ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್‌ 31ರಿಂದ ನವೆಂಬರ್‌ 29ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-3, ಇವರಿಗೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ವೇಳಾಪಟ್ಟಿ ಹೀಗಿದೆ ನೋಡಿ.
ಮಾರ್ಚ್  21: ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ, ಮಾರ್ಚ್ 23: ಅರ್ಥಶಾಸ್ತ್ರ , ಮಾರ್ಚ್ 25: ಗಣಿತ, ಸಮಾಜಶಾಸ್ತ್ರ, ಮಾರ್ಚ್ 27: ಇಂಗ್ಲಿಷ್‌, ಕನ್ನಡ, ಮಾರ್ಚ್ 29: ವಿಜ್ಞಾನ,  ಏಪ್ರಿಲ್ 2: ಸಮಾಜ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ, ಏಪ್ರಿಲ್ 4: ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ.

Edited By

Manjula M

Reported By

Manjula M

Comments