ಬಹುಅಂಗಾಂಗ ವೈಫಲ್ಯ: ಮಾಜಿ ಶಾಸಕ ಎಂ.ಪಿ.ರವೀಂದ್ರ ಇನ್ನಿಲ್ಲ

03 Nov 2018 9:51 AM | General
352 Report

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ .ಪ್ರಕಾಶ್ ಅವರ ಪುತ್ರ ಹಾಗೂ ಮಾಜಿ ಶಾಸಕ ಎಂ.ಪಿ.ರವೀಂದ್ರ ಇಂದು ಬೆಳಗ್ಗೆ ಬಾರದ ಲೋಕಕ್ಕೆ ಪಯಣ ಬೆಳಸಿದ್ದಾರೆ. ಕಳೆದ ಹಲವು ದಿನಗಳಿಂದ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲು ಪಡಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ..  ಆರೋಗ್ಯ ಸಮಸ್ಯೆಯಿಂದಾಗಿ ರವೀಂದ್ರ ಅವರು ರಾಜಕೀಯ ನಿವೃತ್ತಿ ಪಡೆದಿದ್ದರು. ಇನ್ನು ರವೀಂದ್ರ ಅವರು ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಏಕೈಕ ಪುತ್ರ. ಕಳೆದ 2013 ರಲ್ಲಿ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

Edited By

Manjula M

Reported By

Manjula M

Comments