ಇನ್ನು ಈ ಸ್ಥಳಗಳಲ್ಲಿ ಇಂದಿರಾ ಕ್ಯಾಂಟಿನ್  ಶುರುವಾಗಿಲ್ಲ..!

10 Nov 2018 2:59 PM | General
304 Report

ಕಡಿಮೆ ಖರ್ಚಿನಲ್ಲಿ ಬಡವರಿಗೆ ಉಪಯೋಗವಾಗಲಿ ಎಂಬ ದೃಷ್ಟಿಯಿಂದ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಜಾರಿಗೊಳಿಸಲಾಯಿತು.. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಕೂಡ ಒಂದಾಗಿತ್ತು. ಆದರೆ ಇಂದಿರಾ ಕ್ಯಾಂಟೀನ್ 150 ಕಡೆಗಳಲ್ಲಿ ಇನ್ನೂ ಆರಂಭವಾಗಿಲ್ಲ ಎನ್ನುವುದೇ ಹಲವು ಗೊಂದಲಗಳಿಗೆ ಎಡೆ ಮಾಡಿಕೊಟ್ಟಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಯ 198 ವಾರ್ಡ್ ಗಳಲ್ಲಿ ಕ್ಯಾಂಟೀನ್ ಪ್ರಾರಂಭ ಮಾಡಲಾಗಿತ್ತು. . ಇಲ್ಲಿನ ಯಶಸ್ಸನ್ನು ನೋಡಿಕೊಂಡು ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ 249 ಕ್ಯಾಂಟೀನ್ ಆರಂಭಿಸಲು ನಿರ್ಧರಿಸಲಾಗಿತ್ತು. ಅದಕ್ಕೆ ಅಗತ್ಯ ಅನುದಾನವನ್ನು ಕೂಡ ಬಿಡುಗಡೆ ಮಾಡಲಾಗಿತ್ತುಚುನಾವಣೆಗೆ ಮುನ್ನ 72 ಕಡೆಗಳಲ್ಲಿ ಕ್ಯಾಂಟೀನ್ ಶುರುವಾಗಿತ್ತು. ಕಾಂಗ್ರೆಸ್ ಸರ್ಕಾರದ ಎಲ್ಲಾ ಜನಪರ ತೀರ್ಮಾನಗಳನ್ನು ಮುಂದುವರೆಸುವುದಾಗಿ ಕುಮಾರಸ್ವಾಮಿ ಪ್ರಕಟಿಸಿದ್ದರು. ಐದು ತಿಂಗಳ ಅವಧಿಯಲ್ಲಿ 27 ಕಡೆಗಳಲ್ಲಿ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. 93 ಕ್ಯಾಂಟೀನ್ ಗಳ ಕಾಮಗಾರಿ ಇನ್ನು ನಡೆಯುತ್ತಲೇ ಇದೆ ಎಂದು ತಿಳಿಸಿದ್ದಾರೆ.

Edited By

Manjula M

Reported By

Manjula M

Comments