ಗಜ ಚಂಡಮಾರುತ ಎಫೆಕ್ಟ್ : ಬೆಂಗಳೂರಿನಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ

13 Nov 2018 9:24 AM | General
402 Report

ಬೆಂಗಳೂರಿನಲ್ಲಿ ಮಳೆರಾಯ ಕೊಂಚ ಮಟ್ಟಿಗೆ ರಿಲ್ಯಾಕ್ಸ್ ಕೊಟ್ಟಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಜ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡು ಗುರುವಾರ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದರ ಪರಿಣಾಮವಾಗಿ ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 15 ಮತ್ತು 16ರಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ, ವಿಪತ್ತು ನಿರ್ವಹಣಾ ಮಂಡಳಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ. ಹೊರಗಡೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗೋದನ್ನ ಮರೆಯಬೇಡಿ..

Edited By

Manjula M

Reported By

Manjula M

Comments