ಪುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಲಾರಿ : ಬಾಲಕ ಸ್ಥಳದಲ್ಲೆ ಸಾವು..!!

18 Dec 2018 10:04 AM | General
104 Report

ರಸ್ತೆ ಬದಿಯ ಪುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ನಾಗಮಂಗಲದಲ್ಲಿ ನಡೆದಿದೆ.. 14 ವರ್ಷದ ಜೋತು ಚೌಹಾನ್ ಮೃತ ಬಾಲಕ, ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ರಸ್ತೆ ಬದಿಯ ಫುಟ್ ಪಾತ್ ಬಳಿ ಮಲಗಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ನಡೆದಂತಹ ಈ ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.., ಇನ್ನುಳಿದ 13 ಮಂದಿ ಪಾರಾಗಿದ್ದಾರೆ. ಅಪಘಾತವಾದ ತಕ್ಷಣ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯಕ್ಕೆ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

Edited By

Manjula M

Reported By

Manjula M

Comments