ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ: ಕಂಬನಿ ಮಿಡಿದ ಗಣ್ಯಾತಿಗಣ್ಯರು

29 Dec 2018 9:44 AM | General
388 Report

 ನ್ಯಾಯ ನಿಷ್ಟೆ ಹೆಸರಾಗಿರುವ ಮತ್ತು ದಕ್ಷ ಅಧಿಕಾರಿ ಎನಿಸಿಕೊಂಡಿದ್ದ  ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.  ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ ಬೆಂಗಳೂರಿಗೆ ತರಲಾಗುತ್ತಿದ್ದು, ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ಮಧುಕರ್ ಶೆಟ್ಟಿ ಪಾರ್ಥಿವ ಶರೀರವನ್ನು ಮಂಗಳೂರಿಗೆ ಕಳುಹಿಸಿಕೊಂಡಲಾಗುವುದು, ನಾಳೆ ಮಧ್ಯಾಹ್ನ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಎಚ್1 ಎನ್1 ಸೋಂಕಿನಿಂದ ಬಳಲುತ್ತಿದ್ದ ಮಧುಕರ್ ಶೆಟ್ಟಿ ಅವರಿಗೆ ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಕೆಲ ದಿನಗಳಿಂದ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿಯವರ ಸಾವಿಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ..

Edited By

Manjula M

Reported By

Manjula M

Comments