ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದಿಂದ ಸಿಕ್ತು ಗುಡ್ ನ್ಯೂಸ್..!! ಸಿಎಂ ಸೂಚನೆ ಕೊಟ್ಟಿದ್ದು ಯಾರಿಗೆ..!

10 Jan 2019 9:55 AM | General
234 Report

ರಾಜ್ಯದಲ್ಲಿ ಇತ್ತಿಚಿಗೆ ನಿರುದ್ಯೋಗದ ಸಂಖ್ಯೆ ಹೆಚ್ಚಾಗುತ್ತಿದೆ.. ಡಬಲ್ ಡಿಗ್ರಿ ಮಾಡಿಕೊಂಡು ಇರುವವರು ಕೆಲಸ ಇಲ್ಲದೆ ಬರೀ ಕೈಯಲ್ಲಿ ಕಾಲ ಕಳೆಯುವಂತೆ ಆಗಿದೆ. ಈ ನಿಟ್ಟಿನಲ್ಲಿ ಇದನ್ನ ಗಮನದಲ್ಲಿಟ್ಟುಕೊಂಡು ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ, ತೆಂಗಿನ ನಾರಿನ ಉದ್ಯಮ ಸ್ಥಾಪನೆಗೆ ರಾಜ್ಯದಲ್ಲಿ ವಿಫುಲ ಅವಕಾಶಗಳಿದ್ದು, ಕನಿಷ್ಠ 1 ಲಕ್ಷ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು  ನೀಡಿದ್ದಾರೆ.

ತೆಂಗಿನ ನಾರಿನ ಉದ್ಯಮಗಳ ಪುನಶ್ಚೇತನದ ಬಗ್ಗೆ ಚರ್ಚೆ ಮಾಡಲು ಕರೆದಿದ್ದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಈ ಸೂಚನೆ ನೀಡಿದ್ದು, ದೇಶದ ಒಟ್ಟು ತೆಂಗು ಉತ್ಪಾದನೆಯಲ್ಲಿ ಶೇ. 29 ರಷ್ಟು ಕರ್ನಾಟಕದಲ್ಲಿ ಆಗುವ ಮೂಲಕ 2ನೇ ಸ್ಥಾನದಲ್ಲಿದೆ. ಆದರೆ ನಾರಿನ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ. 10 ರಷ್ಟು ಮಾತ್ರ ಎಂದು ತಿಳಿಸಿದರು. ತೆಂಗಿನ ನಾರು ಹೇರಳವಾಗಿ ಲಭ್ಯ ಇರುವುದರಿಂದ ಈ ಉದ್ಯಮದ ಸ್ಥಾಪನೆ ಮತ್ತು ಬೆಳವಣಿಗೆಗೆ ಗಮನ ಕೊಡಬೇಕು ಎಂದು ಸಲಹೆಯನ್ನು ಕೂಡ ನೀಡಿದ್ದಾರೆ. ಒಟ್ಟಾರೆ ನಿರುದ್ಯೋಗ ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರ ಪಣ ತೊಟ್ಟಿದೆ. ಇದರಿಂದ ನಿರುದ್ಯೋಗ ಯುವಕರಿಗೆ ಸಹಾಯವಾಗುತ್ತದೆ.

Edited By

Manjula M

Reported By

Manjula M

Comments