ಸರಳ ಸಜ್ಜನಿಕೆಯ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ..

29 Jan 2019 12:08 PM | General
179 Report

ಬಹಳ ದಿನಗಳಿಂದಲೂ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಇಂದು  ಬೆಳಗ್ಗೆ 7 ಗಂಟೆಗೆ ದಿಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ..ಅಲ್ಜೈಮರ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಇತ್ತೀಚೆಗೆ H1N1 ಸೋಂಕಿಗೆ ತುತ್ತಾಗಿದ್ದು, ಮಂಗಳವಾರ ತಮ್ಮ 88ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಮಂಗಳೂರು ಮೂಲದವರಾದ ಫರ್ನಾಂಡಿಸ್ ಅವರು ಜನತಾ ಪರಿವಾರದ ಮಹಾನಾಯಕರಾಗಿ ಗುರುತಿಸಿಕೊಂಡಿದ್ದು, ವಾಜಪೇಯಿ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 1998ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಜಾರ್ಜ್ ರಕ್ಷಣಾ ಸಚಿವರಾದರು. ಅಪ್ರತಿಮ ಹೋರಾಟಗಾರ, ಸರಳ ಜೀವಿ,ದೇಶಭಕ್ತ ಹಾಗೂ ಹಿರಿಯ ರಾಜಕೀಯ ಮುಖಂಡನ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಗಣ್ಯಾತಿಗಣ್ಯರು ಇವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ..

Edited By

Manjula M

Reported By

Manjula M

Comments