ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ….!!!

14 Mar 2019 11:10 AM | General
275 Report

ಬಸವಧರ್ಮ ಪೀಠದ ಅಧ್ಯಕ್ಷೆ  ಮಾತೆ ಮಹಾದೇವಿ ಸ್ಥಿತಿ ಗಂಭೀರವಾಗಿದ್ದು, ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿ  ಟ್ರೀಟ್’ಮೆಂಟ್ ಪಡೆಯುತ್ತಿದ್ದಾರೆ. ಒಂದು ವರ್ಷದಿಂದ ಮೂತ್ರ ಪಿಂಡದ ಕೊರತೆಯಿಂದ ಬಳಲುತ್ತಿರುವ ಮಾತೆ ಮಹಾದೇವಿ ಅವರು  ಉಸಿರಾಟ ಮತ್ತು ಶ್ವಾಸಕೋಸದ ಸೋಂಕಿನಿಂದಲೂ ಬಳಲುತ್ತಿದ್ದಾರೆ. ಮೂತ್ರಪಿಂಡದ ವೈಫಲ್ಯಕ್ಕೆ ಒಳಗಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದಾರೆ..

ಮಹಾದೇವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಬೇಕಾಗಿರುವುದರಿಂದ  ಅವರನ್ನು  ಯಾವ ಆಸ್ಪತ್ರೆಗೆ ಸೇರಿಸ ಬೇಕೆಂದು ಬಸವ ಮಂಟಪದಲ್ಲಿ ಸಭೆ ಕರೆಯಲಾಗಿದೆ.  ಗೃಹ ಸಚಿವ ಎಂ.ಬಿ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು ಎಲ್ಲಿ ಚಿಕಿತ್ಸೆ ಮುಂದುವರೆಸಬೇಕೆಂಬ ಚರ್ಚೆ ನಡೆಸಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾದೇವಿ ಅವರ ಸ್ಥಿತಿ ಬಗ್ಗೆ ವೈದ್ಯರಿಂದ ಸಲಹೆ ಪಡೆದುಕೊಂಡು ಆ ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.ಎಂಬಿ ಪಾಟೀಲ್ ಅವರು ಬುಧವಾರ ಮಣಿಪಾಲ್ ಆಸ್ಪತ್ರೆಗೆ ತೆರಳಿ ಮಾತೆ ಮಹಾದೇವಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದರು. ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಯ ಹೋರಾಟದಲ್ಲಿ ಮಾತೆ ಮಹಾದೇವಿ ಮುಂಚೂಣಿಯಲ್ಲಿದ್ದರು. ದೆಹಲಿಗೂ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Edited By

Manjula M

Reported By

Kavya shree

Comments