ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಕಾರಿನಲ್ಲಿ ಬೆಂಕಿ..!! ಮುಂದೇನಾಯ್ತು..?

11 Apr 2019 9:31 AM | General
242 Report

ಲೋಕಸಭಾ ಚುನಾವಣೆಯು ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷದವರು ಎಲ್ಲೆಡೆ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮಂಡ್ಯದಲ್ಲಿ ದೋಸ್ತಿಗಳ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಿಳಿದಿದ್ದಾರೆ.. ಹಾಗಾಗಿ ಪುತ್ರನ ಪರ ಸಿಎಂ ಕುಮಾರಸ್ವಾಮಿಯವರೇ ಪ್ರಚಾರ ಮಾಡುತ್ತಿದ್ದಾರೆ.ಮಗನ ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿದ್ದಾರೆ. ಇದರ ನಡುವೆ ಇದೀಗ ಮತ್ತೊಂದು ಅಹಿತಕರ ಘಟನೆ ನಡೆದಿದೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಇದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅವಘಡವೊಂದು ತಪ್ಪಿದೆ. ನಿನ್ನೆ ರಾತ್ರಿ ಶ್ರೀರಂಗಪಟ್ಟಣದ ಪೀಹಳ್ಳಿ ಸಮೀಪ ಈ ಅವಘಡ ಸಂಭವಿಸಿದ್ದು, ಸಿಎಂ.ಹೆಚ್.ಡಿ. ಕುಮಾರಸ್ವಾಮಿ ಅವರು ಕಾರಿನಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಆಪ್ತ ಸಿಬ್ಬಂದಿ ಸಿಎಂ ಕುಮಾರಸ್ವಾಮಿ ಅವರನ್ನು ಕಾರಿನಿಂದ ಕೆಳಗಿಳಿಸಿದ್ದಾರೆ.ಸಿಎಂ ಕುಮಾರಸ್ವಾಮಿ ಅವರ ರೇಂಜ್ ರೋವರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಬೇರೆ ಕಾರಿನಲ್ಲಿ ಕೆಆರ್ ಎಸ್ ಗೆ ತೆರಳಿದ್ದಾರೆ.ಒಟ್ಟಾರೆಯಾಗಿ ಸಣ್ಣದರಲ್ಲಿಯೇ ಎಲ್ಲವೂ ಮುಗಿಯಿತು ಎಂದು ಪಕ್ಷದವರು ನಿಟ್ಟುಸಿರು ಬಿಟ್ಟಿದ್ದಾರೆ.

Edited By

Manjula M

Reported By

Manjula M

Comments