ಟಿಕೆಟ್ ಇಲ್ದೇ ಪ್ರಯಾಣಿಸುತ್ತಿದ್ದ 5851 ಪ್ರಯಾಣಿಕರಿಗೆ ದಂಡ....

24 Apr 2019 1:38 PM | General
205 Report

ಟಿಕೆಟ್ ಇಲ್ಲದೇ ಪ್ರಯಾಣಿಸುವ ಪ್ರಯಾಣಿಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಎಷ್ಟು ಜಾಗೃತಿ ಮೂಡಿಸಿದರೂ ಪ್ರಯೋಜನವಾಗಿಲ್ಲ.ಮಾರ್ಚ್ ನಲ್ಲಿ ನಡೆಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಬಹಳ ಕಟ್ಟುನಿಟ್ಟಾಗಿ ಕೈಗೆತ್ತಿಕೊಂಡಿತ್ತು. 

ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40289 ವಾಹನಗಳನ್ನು ತನಿಖೆಗೊಳಪಡಿಸಿ 4596 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.5851 ಟಿಕೆಟ್ ರಹಿತ ಪ್ರಯಾಣಿಕರಿಂದ 7,52,806 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ. ಟಿಕೆಟ್  ತೆಗೆದುಕೊಳ್ಲದೇ ಇರುವುದು ಅಪರಾಧ ಎಂದು ಗೊತ್ತಿದ್ದರೂ ಪ್ರಯಾಣಿಕರತು ಪದೇ ಪದೇ ತಪ್ಪು ಮಾಡುತ್ತಿದ್ದಾರೆ.ನಿಗಮದ ಆದಾಯದಲ್ಲಿ ಸೋರಿಕೆ 1,07,877 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.

Edited By

Kavya shree

Reported By

Kavya shree

Comments