ಸತ್ತ 5 ತಿಂಗಳ ನಂತರ ಫೋಟೋದಲ್ಲಿ ಕಾಣಿಸಿಕೊಂಡ ತಾಯಿ..!

14 May 2019 3:11 PM | General
334 Report

ತಾಯಿಯಾಗುವುದು ಪ್ರತಿಯೊಂದು ಹೆಣ್ಣಿನ ಕನಸಾಗಿರುತ್ತದೆ… ತನ್ನ ಕನಸನ್ನು ನನಸು ಮಾಡುವ ಸಂದರ್ಭ ಬಂದಾಗ ಆಕೆ ತುಂಬಾ ಖುಷಿಯಾಗಿರುತ್ತಾಳೆ… ಡೆಲಿವರಿಯಾಗುವ ಸಂದರ್ಭದಲ್ಲಿ ಆಕೆ ಸತ್ತು ಬದುಕುತ್ತಾಳೆ… ಇದೀಗ ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿಯ ರೋಚಕ ಕಥೆ ಈ ಸ್ಟೋರಿಯಲ್ಲಿದೆ.. ಸತ್ತ ನಂತರವು ವ್ಯಕ್ತಿಯೊಬ್ಬ ಫೋಟೋಗಳಲ್ಲಿ ಕಾಣಿಸಿಕೊಂಡರೆ ನಂಬಲು ಅಸಾಧ್ಯ ಅಲ್ವ... ಆದರೆ ಮಲೇಷ್ಯಾದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ ಇದರಿಂದ ಎಲ್ಲರೂ ಕೂಡ ಆಶ್ಚರ್ಯ ಚಕಿತರಾಗಿದ್ದರು.

ಇದೇನು ಸತ್ತು ಹೋದವರು ಪೋಟೋದಲ್ಲಿ ಹೇಗೆ ಬರಲು ಸಾಧ್ಯ ಎಂದು ಯೋಚನೆ ಮಾಡುತ್ತಿದ್ದೀರಾ…ಇದೆಲ್ಲಾ ಸಾಧ್ಯವಾದಿದ್ದು ತಂತ್ರಜ್ಞಾನದಿಂದ. ಮಲೇಷ್ಯಾದ ಮಹಿಳಾ ಫೋಟೋಗ್ರಾಫರ್ ಜಾರಾ ಹಲೀನಾ ಅವರ ಸೃಜನಶೀಲತೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಶಂಸೆ ಪಡೆದಿದೆ. ಮಲೇಷ್ಯಾದ ಅಡೆಲಿನ್ ನೆಲ್ಡಾ ನಾಲ್ಕನೇ ಮಗುವಿಗೆ ತಾಯಿಯಾಗುವ ಸಂತಸದಲ್ಲಿದ್ದರು. ನಾಲ್ಕನೇ ಮಗು ಜನಿಸಿದ ಬಳಿಕ ಫ್ಯಾಮಿಲಿ ಫೋಟೋ ಶೂಟ್ ಮಾಡಿಸಬೇಕೆಂಬ ಆಸೆ ಹೊಂದಿದ್ದರು. ಆದರಿಂದ ಅವರು ಫೋಟೋಗ್ರಾಫರ್ ಜಾರಾರನ್ನು ಸಂಪರ್ಕಿಸಿ, ಡೆಲಿವರಿ ಬಳಿಕ ಫ್ಯಾಮಿಲಿ ಫೋಟೋಶೂಟ್ ಮಾಡಿಸಲು ನಿರ್ಧರಿಸಿದ್ದರು. ಆದರೆ ದುರಾದೃಷ್ಟವಶಾತ್ ಡೆಲಿವರಿ ವೇಳೆ ಅಡೆಲಿನಾ ಮೃತಪಟ್ಟಿದ್ದಾರೆ. ಅಲ್ಲದೇ ಅಡೆಲಿನ್ ಸಾವಿನಿಂದ ಆಕೆ ಕನಸಾಗಿದ್ದ ಫ್ಯಾಮಿಲಿ ಫೋಟೋಶೂಟ್ ಕೂಡಾ ಕನಸಾಗಿಯೇ ಉಳಿದಿತ್ತು. ಆದರೆ ಛಾಯಾಗ್ರಾಹಕಿ ಆ ಕನಸನ್ನ ನನಸು ಮಾಡಿದ್ದಾರೆ. ಅಡೆಲಿನ್ ಸಾವನ್ನಪ್ಪಿದ 5 ತಿಂಗಳಲ್ಲೇ ಫ್ಯಾಮಿಲಿ ಫೋಟೋಶೂಟ್ ಆಯೋಜಿಸಿದ ಜಾರಾ ತಂತ್ರಜ್ಞಾನವನ್ನು ಬಳಸಿ ಅಡೆಲಿನ್‍ರನ್ನು ಕೂಡಾ ಈ ಫೋಟೋಗಳಲ್ಲಿ ಕಾಣುವಂತೆ ಕ್ರಿಯೇಟಿವ್ ಎಡಿಟಿಂಗ್ ಮಾಡಿ ಬೇಷ್ ಅನ್ನಿಸಿಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆ ಪೋಟೋ ವೈರಲ್ ಆಗಿದ್ದು ಎಲ್ಲೆಡೆ ಛಾಯಾಗ್ರಾಹಕಿಗೆ ಪ್ರಶಂಸೆಯು ವ್ಯಕ್ತವಾಗಿದೆ.. ಶುಭಾಷಯದ ಮಹಾಪೂರವೇ ಹರಿದುಬಂದಿದೆ.

Edited By

Manjula M

Reported By

Manjula M

Comments