ರೂಂಗೆ ಬಾ, ಅಶ್ಲೀಲ ಸಿಡಿಗಳನ್ನ ನೋಡು ಎಂದು ವೈದ್ಯನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸ..!!

18 May 2019 9:16 AM | General
255 Report

ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವುದು, ಅವರ ಮೇಲೆ ಅತ್ಯಾಚಾರಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೆ ಇವೆ... ಇದೀಗ ವೈದ್ಯನೊಬ್ಬ ಈ ರೀತಿಯ ಕೆಲಸ ಮಾಡಿ ಸಾರ್ವಜನಿಕರಿಂದ ಥಳಿಸಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವೈದ್ಯನೊಬ್ಬ ಆಸ್ಪತ್ರೆಯ ಸಿಬ್ಬಂದಿಗೆ ಹಾಗೂ ರೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗುತ್ತಿದೆ,,ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಆತನನ್ನು ಹಿಗ್ಗಾಮುಗ್ಗಾ ಧಳಿಸಿರುವ ಘಟನೆ ನಡೆದಿದೆ.

ವೈದ್ಯ ಪ್ರಭುಗೌಡ ಪಾಟೀಲ್ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದೆ. ಈತ ಚಿಕಿತ್ಸೆಗೆ ಬರುವ ರೋಗಿಗಳ ಮೈ ಮುಟ್ಟುವುದು ಮತ್ತು ಅಸಭ್ಯವಾಗಿ ಮಾತನಾಡುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಎಲ್ಲಿ ಇದೀಯಾ, ರೂಮ್‍ಗೆ ಬಾ ಎಂದು ಕರೆಯುತ್ತಾನಂತೆ. ಅಷ್ಟೆ ಅಲ್ಲದೇ ಅಶ್ಲೀಲ ಸಿಡಿಗಳನ್ನು ಕೊಟ್ಟು ನೋಡು ಎಂದು ಕಿರುಕುಳ ನೀಡುತ್ತಿದ್ದಾನೆ ಎಂದು ಸಿಬ್ಬಂದಿಯೊಬ್ಬರು ಆರೋಪ ಮಾಡಿದ್ದಾರೆ.. ಈ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ನೂರಾರು ಮಹಿಳೆಯರು ಆಸ್ಪತ್ರೆಗೆ ಆಗಮಿಸಿ ವೈದ್ಯನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಸಿಪಿಐ ಶ್ರೀನಿವಾಸ್, ಗಾಂಧಿನಗರ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇದೀಗ ಆತನ ಮೇಲೆ ದೂರು ದಾಖಲಾಗಿದೆ. ಈ ರೀತಿಯ ಪ್ರಕರಣಗಳು ಆಗಿಂದಾಗೆ ನಡೆಯುತ್ತಿದ್ದರೂ ಕೂಡ ಯಾವುದೆ ಪ್ರಯೋಜನವಾಗಿಲ್ಲ,,

Edited By

Manjula M

Reported By

Manjula M

Comments