ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್ ಇನ್ನಿಲ್ಲ..

10 Jun 2019 9:45 AM | General
307 Report

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಖ್ಯಾತ ಕವಿಯಾದ ಗಿರೀಶ್ ಕಾರ್ನಾಡ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರು ಸ್ವಗೃಹದಲ್ಲಿ ಅವರು ವಿಧಿವಶರಾಗಿದ್ದಾರೆ.. ಇವರು 1938 ಮೇ 19 ರಂದು ಮಹಾರಾಷ್ಟ್ರದ ಮಾಥೇರಾನ್ ನಲ್ಲಿ  ಜನಿಸಿದರು.

ಗಿರೀಶ್ ಕಾರ್ನಾಡ್ ಅವರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಮುಗುಯಿತು.. .ಗಿರೀಶ್ ಕಾರ್ನಾಡ್ ಅವರು  ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಹಲವು ಸಿನಿಮಾಗಳಲ್ಲಿಯೂ ಕೂಡ ಇವರು ಅಭಿನಯಿಸಿದ್ದಾರೆ. ಕಾರ್ನಾಡ್ ಅವರು ಸಾಕಷ್ಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮಶ್ರೀ -೧೯೭೪, ಪದ್ಮಭೂಷಣ -೧೯೯೨, ಜ್ಞಾನಪೀಠ -೧೯೯೮, ಕಾಳಿದಾಸ ಸಮ್ಮಾನ್ – ೧೯೯೮, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಲಭಿಸಿವೆ.

Edited By

Manjula M

Reported By

Manjula M

Comments